ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಂಘಟನೆ ಅಧ್ಯಕ್ಷರಿಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು: ಸಾರ್ವಜನಿಕ ಪ್ರದೇಶದಲ್ಲಿ ನಿಯಮ ಬಾಹಿರವಾಗಿ ಸ್ಥಾಪಿಸಿರುವ ಬಾಬಾ ಸಾಹೇಬ್ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸದ ಅಂಬೇಡ್ಕರ್ ಯುವ ಸಂಘಟನೆ ಅಧ್ಯಕ್ಷ ರೇವಣಸಿದ್ದಪ್ಪ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ದಾವಣಗೆರೆ ಜಿಲ್ಲೆಯ ಹಿರೇಮೇಗಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಮ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿರುವ ಅಂಬೇಡ್ಕರರ ಪ್ರತಿಮೆಯನ್ನು ಸ್ಥಳಾಂತರಿಸುವುದಾಗಿ ಡಾ. ಬಿ.ಆರ್ ಅಂಬೇಡ್ಕರ್ ಸಂಘಟನೆಯ ಅಧ್ಯಕ್ಷ ರೇವಣಸಿದ್ದಪ್ಪ 2021ರ ಆಗಸ್ಟ್ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟು, ನಾಲ್ಕು ತಿಂಗಳಲ್ಲಿ ಪ್ರತಿಮೆ ಸ್ಥಳಾಂತರಿಸುವುದಾಗಿ ತಿಳಿಸಿದ್ದರು. ಇದಕ್ಕೆ ಸಮ್ಮತಿಸಿದ್ದ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಪಡಿಸಿತ್ತು. ಆದರೆ, ಭರವಸೆಯಂತೆ ಪ್ರತಿಮ ಸ್ಥಳಾಂತರಿಸದ ಹಿನ್ನೆಲೆಯಲ್ಲಿ ಸಂಘಟನೆ ಅಧ್ಯಕ್ಷರು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿ, ಸಮನ್ಸ್ ಜಾರಿ ಮಾಡಿದೆ ಎಂದು ಲೀಗಲ್ ನ್ಯೂಸ್ ವರದಿ ಮಾಡಿದೆ.

ಹಿನ್ನೆಲೆ: ಡಾ. ಬಿ.ಆರ್ ಅಂಬೇಡ್ಕರರ ಪ್ರತಿಮೆಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅನಧಿಕೃತವಾಗಿ ಸ್ಥಾಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ್ದ ಪೀಠ, ಮಹಾನ್ ಮಾನವತಾವಾದಿ, ನ್ಯಾಯಪರಿಪಾಲನೆಯನ್ನು ಅದಮ್ಯವಾಗಿ ನಂಬಿದ್ದ ಸಂವಿಧಾನ ಶಿಲ್ಪಿ ಅಂಬೇಡ್ಕರರ ಪ್ರತಿಮೆಯನ್ನು ಕಾನೂನು ಬಾಹಿರವಾಗಿ ಸ್ಥಾಪಿಸುವುದು ಅವರಿಗೆ ಮಾಡುವ ಅಪಮಾನ ಎಂದು ಬೇಸರ ವ್ಯಕ್ತಪಡಿಸಿತ್ತು. ಈ ವೇಳೆ ನ್ಯಾಯಾಲಯದ ಕ್ಷಮೆ ಕೋರಿದ್ದ ಸಂಘಟನೆ, ಪುತ್ಥಳಿ ಮರುಸ್ಥಾಪಿಸಲು ಸೂಕ್ತ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಕೋರಿತ್ತು. ಆದರೆ, ಸರ್ಕಾರ ಸ್ಥಳ ನೀಡಲು ನಿರಾಕರಿಸಿತ್ತು. ನಂತರ, ಪುತ್ಥಳಿ ಸ್ಥಳಾಂತರಿಸುವುದಾಗಿ ಸಂಘದ ಪ್ರತಿನಿಧಿಗಳು ಆಗಸ್ಟ್‌ 9ರಂದು ನ್ಯಾಯಾಲಯಕ್ಕೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ಇತ್ಯರ್ಥಪಡಿಸಿದ್ದ ನ್ಯಾಯಾಲಯ ಡಿಸೆಂಬರ್‌ 17 ರೊಳಗೆ ಪ್ರತಿಮೆ ಸ್ಥಳಾಂತರಿಸಿ, ಅನುಪಾಲನಾ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!