ದೊಡ್ಡಬಳ್ಳಾಪುರ: ನ್ಯಾಯವಾದಿಯೊಬ್ಬರು ಕರ್ತವ್ಯ ನಿರತ ಸಿಬ್ಬಂದಿಯ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ, ನಗರಸಭೆ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಿಬ್ಬಂದಿ ನಾರಾಯಣಸ್ವಾಮಿ, ನ್ಯಾಯವಾದಿ ವೆಂಕಟೇಶ್ ಎನ್ನುವವರು ಕೆಲಸವೊಂದರ ವಿಚಾರವಾಗಿ ಇಂದು ಕಚೇರಿಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿದ್ದಾರೆ.
ಸರ್ಕಾರಿ ಕರ್ತವ್ಯ ನಿರತರನ್ನು ನಿಂದಿಸಿರುವ ಕುರಿತು ಈ ಕೂಡಲೇ ಬಹಿರಂಗ ಕ್ಷಮೆಯಾಚಿಸಬೇಕು ಹಾಗೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಬೇಕೆಂದು ಪಟ್ಟುಹಿಡಿದಿರುವ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….