ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ಕೊಟ್ಟಸಾಲ ಪಾವತಿ ಯಾಗುವುದು.
ವೃಷಭ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವುದು.
ಮಿಥುನ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
ಕಟಕ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವುದು. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು.
ಸಿಂಹ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.
ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯದ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು.
ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಧನಸ್ಸು: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ.
ಕುಂಭ: ಹಿರಿಯರ ಮಾರ್ಗದರ್ಶನ ದೊರೆಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು.
ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ ನೀಡಲಿದ್ದೀರ. ಇದ್ದಕ್ಕಿದಂತೆ ಶುಭಕರ ಒಲವು.ಮದುವೆಯ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.
ತಿಥಿ: ಚತುರ್ಥಿ
ನಕ್ಷತ್ರ: ಆಶ್ಲೇಷ ನಕ್ಷತ್ರ
ರಾಹುಕಾಲ: 01:47 ರಿಂದ 03:13
ಗುಳಿಕಕಾಲ: 09:30 ರಿಂದ 10:56
ಯಮಗಂಡಕಾಲ: 06:39 ರಿಂದ 08:04
ಈ ದಿನದ ವಿಶೇಷ: ಮಾರ್ಗಶಿರ ಲಕ್ಷ್ಮೀ ವ್ರತ
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….