ಹೊಸ ವರ್ಷ ಆಚರಣೆಗೆ ನಂದಿ ಗಿರಿಧಾಮ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ: ದಿನಾಂಕ:01-01-2022 ರಂದು ಹೊಸ ವರ್ಷದ ದಿನಾಚರಣೆಯ ಸಂಬಂಧವಾಗಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ ಹಾಗೂ ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ದಿನಾಂಕ 31/12/2021 ಮತ್ತು 01/01/2022 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರು ಗುಂಪು-ಗುಂಪಾಗಿ ತಿರುಗಾಡುವುದು, ಮದ್ಯಪಾನ ಮಾಡುವುದು, ಪ್ಲಾಸ್ಟಿಕ್ ಬಾಟಲ್ ಗಳನ್ನು ಎಸೆಯುವುದು ಹಾಗೂ ಇತ್ಯಾದಿ ಚಟುವಟಿಕೆಗಳು ನಡೆಯುವ ಸಂಭವ ಹೆಚ್ಚಾಗಿರುವುದರಿಂದ ಇದನ್ನು ತಡೆಗಟ್ಟುವ ಸಲುವಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಂದಿ ಗಿರಿಧಾಮಕ್ಕೆ ದಿನಾಂಕ 30-12-2021 ರ ಸಂಜೆ 6:00 ಗಂಟೆಯಿಂದ ದಿನಾಂಕ:02-01-2022 ರ ಬೆಳಗ್ಗೆ 6:00 ಗಂಟೆಯವರೆಗೆ ಸಾರ್ವಜನಿಕರು/ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡುತ್ತಾ ರಾಜ್ಯದಲ್ಲಿ ಕೋವಿಡ್-19 ರೂಪಾಂತರಿಕ ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳು ಕೈಗೊಂಡಿದೆ. ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಂಬಂಧದಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಕಂಡುಬಂದಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹೊಸವರ್ಷವನ್ನು ಸರಳವಾಗಿ ಆಚರಿಸಬೇಕಾಗಿರುತ್ತದೆ.

ಈ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಾಮೂಹಿಕ ಕೂಟ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಮತ್ತು ಪಬ್/ಬಾರ್/ರೆಸ್ಟೋರೆಂಟ್ ಹಾಗೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳದಲ್ಲಿ ಆಯೋಜಿಸುವುದನ್ನು ಸರ್ಕಾರವು ನಿಷೇಧಿಸಿರುತ್ತದೆ.

ಈ ನಿಟ್ಟಿನಲ್ಲಿ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ಜನಸಂದಣಿಯನ್ನು ತಡೆಯುವುದು ಅತ್ಯವಶ್ಯಕವಾಗಿರುವುದರಿಂದ ಮತ್ತು ಕೋವಿಡ್-19 ರ ಕುರಿತಂತೆ ಇತ್ತೀಚೀನ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ನಂದಿ ಗಿರಿಧಾಮಕ್ಕೆ ದಿನಾಂಕ 30-12-2021 ರ ಸಂಜೆ 6:00 ಗಂಟೆಯಿಂದ ದಿನಾಂಕ:02-01-2022 ರ ಬೆಳಗ್ಗೆ 6:00 ಗಂಟೆಯವರೆಗೆ ಸಾರ್ವಜನಿಕರು/ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]