ಸರ್ಕಾರದ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಂಡರೆ ಕೃಷಿಯಿಂದ ಹೆಚ್ಚಿನ ಲಾಭ: ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು

ದೊಡ್ಡಬಳ್ಳಾಪುರ: ಕೃಷಿ ಯಾಂತ್ರೀಕರಣ, ಬೆಂಬಲ ಬೆಲೆಯ ಖರೀದಿ ಮೊದಲಾಗಿ  ರೈತರಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಂಡರೆ ವೃತ್ತಿಪರರು ಸಂಬಳ ಪಡೆಯುವುದಕ್ಕಿಂತ ಹೆಚ್ಚಾಗಿ,  ಕೃಷಿಯಿಂದ ಲಾಭ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ತಿಳಿಸಿದರು.

ತಾಲೂಕಿನ ಮೆಳೇಕೋಟೆಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ವತಿಯಿಂದ ನಡೆದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎರಡು ಎಕರೆ ಭೂಮಿ ಹೊಂದಿರುವ ರೈತರು ಸಮಗ್ರ ಕೃಷಿ ಪದ್ದತಿ ಅನುಸರಿಸಿದರೆ ಆರ್ಥಕವಾಗಿ ಸದೃಢರಾಗಬಹುದು. ಇದರೊಂದಿಗೆ ಪುಷ್ಪೋದ್ಯಮಕ್ಕೂ ಸಹ ಸರ್ಕಾರ ಸಹಾಯಧನ ನೀಡುತ್ತಿದ್ದು, ಹೆಚ್ಚಿನ ಜಮೀನು ಹೊಂದಿರುವವರು ಪುಷ್ಪೋದ್ಯಮ ಮಾಡಬಹುದು. ಹನಿ ನೀರಾವರಿ, ಕೃಷಿಯಲ್ಲಿ ಆಧುನಿಕ ಪದ್ದತಿಗಳನ್ನು ರೈತರು ಅಳವಡಿಸಿಕೊಳ್ಳಬೇಕಿದೆ ಎಂದ ಅವರು ತೆಂಗಿನ ನಾರಿಗೂ ಸಹ ಹೆಚ್ಚು ಬೇಡಿಕೆ ಇದ್ದು, ರೈತರು ಇದನ್ನು ನಾಶ ಪಡಿಸದೇ, ಕೊಳ್ಳುವವರಿಗೆ ನೀಡಬೇಕಿದೆ. ತೆಂಗಿನಿಂದ 150 ರೀತಿಯ ಉತ್ಪನ್ನಗಳನ್ನು ಮಾಡಲಾಗುತ್ತಿದೆ ಎಂದರು.

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಇಂದು ರೈತರ ಸ್ಥಿತಿಗತಿಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ರೈತರ ಆದಾಯ ದ್ವಿಗುಣ ಎನ್ನುವುದು ಬರೀ ಮಾತಿಗೆ ಸೀಮಿತವಾಗಿದೆ. ಕೃಷಿಯನ್ನು ಬಹುರಾಷ್ಟ್ರೀಯ ಕಂಪನಿಗಳ ವಶಕ್ಕೆ ಒಪ್ಪಿಸುವ ಬದಲಾಗಿ ಸ್ಥಳೀಯವಾಗಿ ಸ್ವದೇಶಿ ಕಂಪನಿಗಳ ಮೂಲಕ ಐತರಿಗೆ ನೆರವಾಗಬೇಕಿದೆ. ಈ ದಿಸೆಯಲ್ಲಿ ಹಾಡೋನಹಳ್ಳಿ ಅರ್ಕಾವತಿ ರೈತ ಉತ್ಪಾದಕ ಕಂಪನಿ ರೈತರಿಗೆ ವಿವಿಧ ಸೌಲಭ್ಯಗಳನ್ನು ನೀಡುವಲ್ಲಿ ಕಾರ್ಯೋನ್ಮುಖವಾಗಿದೆ ಎಂದರು.

ಪ್ರಗತಿಪರ ಕೃಷಿಕ ಕೃಷ್ಣಮೂರ್ತಿ ಮಾತನಾಡಿ, ಆಧುನಿಕತೆ ಅಳವಡಿಸಿಕೊಂಡು ಕೃಷಿ ಪದ್ದತಿ ನಡೆಸಿದಲ್ಲಿ ಯಾವ ರೈತರಿಗೂ ನಷ್ಟ ಉಂಟಾಗುವುದಿಲ್ಲ. ಅದರಲ್ಲಿಯು ಸಮಗ್ರ ಕೃಷಿ ಪದ್ದತಿ ರೈತನಿಗೆ ವರದಾನವಾಗಿದೆ ಎಂದರು.

ಸಮಾರಂಭದಲ್ಲಿ  ಪ್ರಗತಿಪರ ರೈತರಿಗೆ ಕೃಷಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಹಿಂಗಾರು ಬೆಳೆ ಸಮೀಕ್ಷೆ ಕುರಿತ ಪೋಷ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಆಂಜನ ಗೌಡ, ಮೆಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ.ಎಸ್ ಗೌರೀಶ್, ಉಪಾಧ್ಯಕ್ಷ ಮುನಿರಾಜು, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ವಿಭಾಗದ ಅಧಿಕಾರಿ ರೂಪ, ಮಧುರೆ ಹೋಬಳಿ ಕೃಷಿ ಅಧಿಕಾರಿ ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಯ್ಯ, ಮುಖಂಡರಾದ ಜಯರಾಮಯ್ಯ, ರಾಜ್‍ಕುಮಾರ್, ಪ್ರಗತಿಪರ ರೈತ ಭಾಸ್ಕರ್ ಸೇರಿದಂತೆ ಮೆಳೇಕೋಟೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೃಷಿಕ ಸಮಾಜದ ಸದಸ್ಯರು, ರೈತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!