ಇ-ಶ್ರಮ್ ಯೋಜನೆಯ ಬಗ್ಗೆ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಚಾಲನೆ

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ಇವರ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಇ-ಶ್ರಮ್ ಯೋಜನೆ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೊಂದಣಿಯಾಗುವ ವಿಧಾನ ಮತ್ತು ಸೌಲಭ್ಯಗಳ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ 14 ದಿವಸಗಳ ಕಾಲ ಈ ವಾಹನವು ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.

ಜಿಲ್ಲೆಯ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹೆಚ್ಚಾಗಿ ನೋಂದಾಯಿಸಿಕೊಂಡು ಗುರುತಿನ ಚೀಟಿಯನ್ನು ಪಡೆದುಕೊಳ್ಳುವ ಮೂಲಕ ಮಂಡಳಿಯಿಂದ ದೊರೆಯುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್), ಅಂತ್ಯ ಕ್ರಿಯೆ ವೆಚ್ಚ  ಹಾಗೂ ಅನುಗ್ರಹ ರಾಶಿ ಸಹಾಯ ಧನ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ ಸಹಾಯಧನ, ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ, ಮದುವೆ ಸಹಾಯಧನ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದರು.

ಅಲ್ಲದೇ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಇ-ಶ್ರಮ್ ಯೋಜನೆಯಡಿ ಇ.ಎಸ್.ಐ ಮತ್ತು ಪಿ.ಎಫ್ ಸದ್ಯರಾಗಿರದ ಹಾಗೂ ಆದಾಯ ತೆರಿಗೆ ಪಾವತಿಸದ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು  ಸಾಮಾನ್ಯ ಸೇವಾ ಕೇಂದ್ರಗಳಿಗೆ (ಸಿ.ಎಸ್‌.ಸಿ) ತೆರಳಿ ನೊಂದಾಯಿಸಿಕೊಳ್ಳಬಹುದು. ಅಥವಾ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಸದರಿ ಯೋಜನೆಯಡಿ ನೋಂದಾಯಿಸಿ ಯೋಜನೆ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮೀ ರವರು ಮಾತನಾಡಿ, ಈ ಜಿಲ್ಲೆಯಲ್ಲಿ 43,032 ಕಟ್ಟಡ ಕಾರ್ಮಿಕರು ನೋಂದಣಿಯಾಗಿ ಗುರುತಿನ ಚೀಟಿಯನ್ನು ಪಡೆದುಕೊಂಡಿದ್ದಾರೆ. ಈ ಪೈಕಿ 11,342 ಫಲಾನುಭವಿಗಳು ವಿವಿಧ ಸೌಲಭ್ಯಗಳಡಿ ಮೊತ್ತವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಸುರಕ್ಷಾ ಭವನ, ಬೆಂಗಳೂರು ವತಿಯಿಂದ ಪಡೆದುಕೊಂಡಿರುತ್ತಾರೆ. ಈ ಪೈಕಿ ಶೈಕ್ಷಣಿಕ ಧನಸಹಾಯ 10,146 ಫಲಾನುಭವಿಗಳಿಗೆ ರೂ.8,75,56,243/-, ಅಂತ್ಯ ಸಂಸ್ಕಾರ 10 ಫಲಾನುಭವಿಗಳಿಗೆ ರೂ.40,000/-, ಹೆರಿಗೆ ಸಹಾಯಧನ 29 ಫಲಾನುಭವಿಗಳಿಗೆ ರೂ.7,75,000/-, ಪ್ರಮುಖ ವೈದ್ಯಕೀಯ ಧನಸಹಾಯ 63 ಫಲಾನುಭವಿಗಳಿಗೆ 32,16,858/-, ಮದುವೆ ಧನಸಹಾಯ 1,094 ಫಲಾನುಭವಿಗಳಿಗೆ 5,47,50,000/- ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೆಪ್ಟ್ ಮೂಲಕ ಜಮೆ ಮಾಡಲಾಗಿರುತ್ತದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಇ-ಶ್ರಮ್ ಯೋಜನೆಯಡಿ 66,740 ಅಸಂಘಟಿತ ಕಾರ್ಮಿಕರು ನೋಂದಣಿಯಾಗಿರುತ್ತಾರೆ. ಇನ್ನೂ ಹೆಚ್ಚಿನ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಹೆಚ್ಚಿನ ಪ್ರಮಾಣದಲ್ಲಿ ನೊಂದಣಿ ಮಾಡಿಸಿ, ಆಯಾ ಸೌಲಭ್ಯಗಳಡಿ ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇ-ಶ್ರಮ್ ನೊಂದಣಿಯು ಉಚಿತವಾಗಿದ್ದು, ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಮತ್ತು ಇ-ಶ್ರಮ್ ಯೋಜನೆಯ ನೊಂದಣಿಗಾಗಿ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ಭೇಟಿ ಮಾಡುವುದು ಅಥವಾ ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೊಂದಣಿ ಮಾಡಿಕೊಳ್ಳಬಹುದು ಹಾಗೂ ನೊಂದಾಯಿತ ಕಾರ್ಮಿಕರು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು (UAN) ಪಡೆಯಬಹುದಾಗಿದ್ದು, ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿದ್ದು, ಈ ಎಲ್ಲಾ ಸೌಲಭ್ಯಗಳನ್ನು ಅರ್ಹ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳುವಂತೆ  ಮನವಿ  ಮಾಡಿದರು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಕೊಠಡಿ ಸಂಖ್ಯೆ; ಜಿಎ-3, ನೆಲಮಹಡಿ. ಜಿಲ್ಲಾಡಳಿತ ಭವನ, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ ಹಾಗೂ ಎಲ್ಲಾ ತಾಲ್ಲೂಕು ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರುಗಳ ಕಛೇರಿ ಮತ್ತು ಕಾರ್ಮಿಕ ಸಹಾಯವಾಣಿ-155214, ಇ-ಶ್ರಮ್ ಸಹಾಯವಾಣಿ-14434 ಅನ್ನು ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಎಂ.ಮಂಜುಳ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!