ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಉದ್ಯೋಗದ ನೇಮಕಾತಿ ಸಚಿವಾಲಯ ಕಾರ್ಮಿಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ತಾಲೂಕು ಘಟಕ, ಶ್ರೀ ಗಾಯತ್ರಿ ವಿಪ್ರ ವೇದಿಕೆ, ದೊಡ್ಡಬಳ್ಳಾಪುರ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಪುರೋಹಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತು ಸಾಮಾನ್ಯ ಸೇವಾ ಕೇಂದ್ರ ಸಹಕಾರದೊಂದಿಗೆ ನಗರದ ಶ್ರೀ ವೈಕುಂಠ ಜನಾರ್ದನ ಸ್ವಾಮಿ ದೇವಾಲಯದಲ್ಲಿ ಇ-ಶ್ರಮ್ ಕಾರ್ಡ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು ಗ್ರಾಮಾಂತರ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್.ನಾಗೇಂದ್ರ ಅಭಿಯಾನಕ್ಕೆ ಚಾಲನೆ ನೀಡಿ, ಅಸಂಘಟಿತ ಕಾರ್ಮಿಕರಿಗೆ ನೀಡುವ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕರು ಸರ್ಕಾರ ದತ್ತಾಂಶದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ. ಕೇಂದ್ರ ಸರ್ಕಾರದ ಇ-ಶ್ರಮ್ ಯೋಜನೆಯಲ್ಲಿ ನೋಂದಾಯಿಸಿದವರಿಗೆ ಸರ್ಕಾರದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಮಂಜುಳಾ ಕೆ.ರಮೇಶ್, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಎಸ್.ನವೀನ್, ವಿ.ಬಿ.ಇನ್ಪೋಟೆಕ್‍ನ ವೀರೇಶ್ ಕುಮಾರ್, ಪ್ರಕೃತಿ ಕಂಪ್ಯೂಟರ್ಸ್‍ನ ಕೆ.ಕೃಷ್ಣಮೂರ್ತಿ, ಮುಖಂಡರಾದ ರಮೇಶ್, ವೆಂಕಟೇಶ್, ಹಿರಿಯ ಆಗಮಿಕರಾದ ಶ್ರೀನಿವಾಸ ರಾಘವನ್ ಮತ್ತಿತರರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….