ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಕ್ರಮ ವಹಿಸಿ: ಡಾ.ಬಿ.ಆರ್.ಮಮತ

ಬೆಂ.ಗ್ರಾ.ಜಿಲ್ಲೆ: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪ್ರಗತಿಯಲ್ಲಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡುವ ಮೂಲಕ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಕಾಲ ಮಿಷನ್‌ನ ಹೆಚ್ಚುವರಿ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಮತದಾರರ ಪಟ್ಟಿ ವೀಕ್ಷಕರಾದ ಡಾ. ಬಿ.ಆರ್.ಮಮತ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಜನವರಿ 1, 2022 ಅನ್ನು ಅರ್ಹತಾ ದಿನಾಂಕವನ್ನು ಆಧರಿಸಿ ಈ ದಿನಾಂಕಕ್ಕೆ 18 ವರ್ಷ ಪೂರೈಸುವವರ ಹೆಸರನ್ನು ನೋಂದಣಿ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ವರ್ಗಾವಣೆ, ನಮೂನೆ 6, 7, 8 ಹಾಗೂ 8 ಎ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 27ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು 2022ರ ಜನವರಿ 13ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಗೆ ನೋಂದಣಿ ಹಾಗೂ ತಿದ್ದುಪಡಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ, ಹೆಚ್ಚು ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ತಿಳಿಸಿದರಲ್ಲದೆ, ಹಕ್ಕು ಮತ್ತು ಆಕ್ಷೇಪಣೆ ಹಂತದಲ್ಲಿ ಯಾವುದೇ ತರಹದ ನ್ಯೂನ್ಯತೆಗಳು ಗಮನಕ್ಕೆ ಬಂದಲ್ಲಿ, ಆಯಾ ತಾಲ್ಲೂಕಿನ ತಹಶೀಲ್ದಾರರು ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಹಾಗೂ ದೊಡ್ಡಬಳ್ಳಾಪುರ ತಹಶೀಲ್ದಾರ್‌ ಟಿ.ಎಸ್.ಶಿವರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ನಂತರ ಅರ್ಜಿ ವಿಲೇವಾರಿ ಹೆಚ್ಚಿರುವ ಹೊಸಕೋಟೆ ತಾಲ್ಲೂಕಿನ ಗಾಣಿಗರ ಪೇಟೆ ಮತ್ತು ಕಿಲಾರಿಪೇಟೆ ಹಾಗೂ ಕಡಿಮೆ ಅರ್ಜಿ ವಿಲೇವಾರಿ ಮಾಡಲಾಗಿರುವ ಅತ್ತಿಬೆಲೆ ಮತಗಟ್ಟೆ ಪ್ರದೇಶದಕ್ಕೆ ಬೆಂಗಳೂರು ಗ್ರಾಮಾಂತರ ಮತದಾರರ ಪಟ್ಟಿ ವೀಕ್ಷಕರಾದ ಡಾ.ಬಿ.ಆರ್.ಮಮತ ಅವರು ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]