ದೊಡ್ಡಬಳ್ಳಾಪುರ: ನಿಖಿಲ್ ಕುಮಾರಸ್ವಾಮಿ ನಟನೆಯ ಬಹುನಿರೀಕ್ಷೆಯ ‘ರೈಡರ್’ ಸಿನಿಮಾ ಬಿಡುಗಡೆಯಾಗಿದ್ದು, ಇಂದು ನಗರದ ರಾಜ್ ಕಮಲ್ ಚಿತ್ರಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅಂಜನ್ ಮುನೇಗೌಡ ಮತ್ತು ಆರ್.ಮಧುಸೂದನ್ ಹರಿತಲೇಖನಿಗೆ ತಿಳಿಸಿದ್ದಾರೆ.
ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ಅವರ ಕನ್ನಡದ ಚೊಚ್ಚಲ ಕಮರ್ಷಿಯಲ್ ಎಂಟರ್‌ಟೈನರ್ ರೈಡರ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ನಿಖಿಲ್ ಕುಮಾರ್, ಕಶ್ಮೀರ ಪರದೇಶಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಸಿನಿಮಾವನ್ನು ಲಹರಿ ಪ್ರೊಡಕ್ಷನ್ಸ್ ಹಾಗೂ ಶಿವನಂದಿ ಎಂಟ್ರೈನ್‌ಮೆಂಟ್ಸ್ ನಿರ್ಮಾಣ ಮಾಡಿದೆ. ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ಕಥಾಹಂದರವನ್ನು ಚಿತ್ರವು ಹೊಂದಿದ್ದು, ತೆಲುಗಿನ ವಿಜಯ್ ಕುಮಾರ್ ಕೊಂಡ ಇದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ರೈಡರ್ ಪ್ರಚಾರಕ್ಕಾಗಿ ರಾಜ್ ಕಮಲ್ ಚಿತ್ರಮಂದಿರಕ್ಕೆ ಬರಲಿರುವ ನಿಖಿಲ್ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ ಎಂದವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….