ದೊಡ್ಡಬಳ್ಳಾಪುರ: ಡಿಸೆಂಬರ್ 24 ರಂದು ತೆರೆ ಕಂಡಿರುವ ತಮ್ಮ ರೈಡರ್ ಚಿತ್ರದ ಪ್ರಚಾರಕ್ಕಾಗಿ ನಟ ಸ್ಯಾಂಡಲ್‌ವುಡ್‌ನ ಯುವರಾಜ ನಿಖಿಲ್ ಕುಮಾರಸ್ವಾಮಿ ಅವರು ಶನಿವಾರ ದೊಡ್ಡಬಳ್ಳಾಪುರಕ್ಕೆ ಆಗಮಿಸಿದ್ದರು.
ನಗರದ ರಾಜ್ ಕಮಲ್ ಚಿತ್ರಮಂದಿರಕ್ಕೆ ಆಗಮಿಸಿದ ಅವರಿಗೆ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದರು.
ನಿಖಿಲ್ ಕುಮಾರಸ್ವಾಮಿ ಬರುತ್ತಿದ್ದಂತೆ ಅಂಜನ್ ಮುನೇಗೌಡ ಸ್ವಾಗತ ಕೋರಿದರು. ಬಸ್ ನಿಲ್ದಾಣದ ವೃತ್ತದಿಂದ ರಾಜ್ ಕಮಲ್ ಚಿತ್ರ ಮಂದಿರದ ವರೆಗೂ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು.
ಈ ವೇಳೆ ಚಿತ್ರಮಂದಿರದ ಸುತ್ತ ಅಭಿಮಾನಿಗಳು ಜಮಾಯಿಸಿ. ಚಿತ್ರಮಂದಿರದ ಬಳಿ ಪಟಾಕಿ ಸಿಡಿಸಿ ಹೂ ಮಳೆ ಸುರಿಸುವ ಮೂಲಕ ನಿಖಿಲ್ ರನ್ನು ಅಭಿಮಾನಿಗಳು ಅದ್ದೂರಿಯಾಗಿ ಬರಮಾಡಿಕೊಂಡರು.
ಚಿತ್ರಮಂದಿರದ ಒಳಗೆ ಪ್ರವೇಶಿಸುತ್ತಿದ್ದಂತೆ ನಿಖಿಲ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯ್ತು.
ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಮುನೇಗೌಡ, ನಿಖಿಲ್ ಸೇನಾ ಸಮಿತಿ, ಜೆಡಿಎಸ್ ಮುಖಂಡರು, ಅಭಿಮಾನಿಗಳು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….