ತುರ್ತು ಕ್ರಮಕ್ಕೆ ಸದಾ ಸನ್ನದ್ಧವಾಗಿರಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ನೈಸರ್ಗಿಕ ಅಥವಾ ಮಾನವ ನಿರ್ಮಿತ ವಿಪತ್ತುಗಳು ಸಂಭವಿಸಿದಾಗ ಉಂಟಾಗುವ ಹಾನಿ, ಸಾವು-ನೋವುಗಳನ್ನು ತಡೆಯಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುರ್ತು ಕ್ರಮಗಳನ್ನು ಕೈಗೊಂಡು ಪರಿಸ್ಥಿತಿ ನಿಭಾಯಿಸಲು ಸದಾ ಸನ್ನದ್ಧರಾಗಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ತಿಳಿಸಿದರು.

ರಾಸಾಯನಿಕ ವಿಪತ್ತು ನಿವಾರಣಾ ದಿನಾಚರಣೆಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಹಾಗೂ ತೈಲ ಮಾರುಕಟ್ಟೆ ಕಂಪನಿಗಳ ಸಹಯೋಗದೊಂದಿಗೆ ಹೊಸಕೋಟೆ ತಾಲ್ಲೂಕಿನ ದೇವನಗೊಂದಿ ಗ್ರಾಮದ ಬಳಿಯಿರುವ ಐಓಸಿಎಲ್‌ನ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಸಂಗ್ರಹಣಾ ಘಟಕದಲ್ಲಿ ನಡೆದ ವಿಪತ್ತು ನಿರ್ವಹಣೆ ಕುರಿತ ಅಣುಕು ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ರಾಸಾಯನಿಕ ಅನಿಲಗಳ ಸೋರಿಕೆ, ಅಗ್ನಿ ಅವಘಡ ಸೇರಿದಂತೆ ಯಾವುದೇ ರೀತಿಯ ತುರ್ತು ಪರಿಸ್ಥಿತಿಯ ಸವಾಲುಗಳು ಎದುರಾದಾಗ ಎನ್.ಡಿ.ಆರ್.ಎಫ್., ಅಗ್ನಿಶಾಮಕ, ಆರೋಗ್ಯ, ಪೊಲೀಸ್, ಕಂದಾಯ, ಜಿಲ್ಲಾ ಪಂಚಾಯಿತಿ, ಸಾರಿಗೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕಾರ್ಯ ನಿರ್ವಹಿಸುವುದರಿಂದ ವಿಪತ್ತನ್ನು ಸುಲಭವಾಗಿ ಪರಿಹರಿಸಬಹುದು ಎಂದರು.

ಅಪಾಯಕಾರಿ ರಾಸಾಯನಿಕಗ ವಸ್ತುಗಳ ಉಪಯೋಗವನ್ನು ಕನಿಷ್ಟಗೊಳಿಸಿ, ಅವಶ್ಯವಿದ್ದಲ್ಲಿ ಸುರಕ್ಷಾ ಮತ್ತು ಪರಿಸರಸ್ನೇಹಿ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಬೇಕು ಎಂದರಲ್ಲದೆ, ಸದೃಢ ಮತ್ತು ಸುರಕ್ಷಿತವಾದ ಕಾರ್ಯಾಚರಣೆ, ಕ್ರಮಬದ್ಧವಾದ ಉಪಕರಣಗಳನ್ನು, ಅಪಾಯಗಳ ನಿಯಂತ್ರಣದ ಕ್ರಮಗಳು ಮತ್ತು ತುರ್ತು ನಿರ್ವಹಣೆಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅಪಾಯಕಾರಿ ರಾಸಾಯನಿಕ ವಸ್ತುಗಳನ್ನು ತಯಾರಿಸುವ, ಶೇಖರಿಸುವ ಉಪಯೋಗಿಸುವ ಮತ್ತು ಸಾಗಾಣಿಕೆ ಮಾಡುವ ಉದ್ದಿಮೆದಾರರಲ್ಲಿ ಮತ್ತು ಕೈಗಾರಿಕೆಗಳಿಗೆ ಸುರಕ್ಷತೆಯ ಕುರಿತು ನಿಖರವಾದ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.

ದುರಂತದಿಂದ ಮನುಷ್ಯನಿಗೆ ಸಂಭವಿಸುವ ನೋವು ಮತ್ತು ನಷ್ಟಗಳನ್ನು ಕನಿಷ್ಟಗೊಳಿಸುವ ಹಾಗೂ ಪರಿಣಾಮಕಾರಿಯಾಗಿ ತುರ್ತು ಸ್ಥಿತಿಗಳನ್ನು ನಿಭಾಯಿಸುವ ಕುರಿತು ಕೆಲಸಗಾರರನ್ನು ಸಿದ್ಧಗೊಳಿಸಬೇಕು ಎಂದರಲ್ಲದೆ, ಆಡಳಿತ ವರ್ಗದವರಿಗೆ ವಿಪತ್ತುಗಳ ನಿವಾರಣೆಯಲ್ಲಿ ಅವರ ಜವಾಬ್ದಾರಿ ಮತ್ತು ಪಾತ್ರಗಳು, ಸಂಬಂಧಿಸಿದ ಇಲಾಖೆಯವರಿಗೆ ತರಬೇತಿ ನೀಡುವ ಪ್ರಾಮುಖ್ಯತೆ ಮತ್ತು ಸಾರ್ವಜನಿಕ ತಿಳುವಳಿಕೆ ಮೂಡಿಸುವುದಾಗಿದೆ ಎಂದು ಹೇಳಿದರು.

ಜಿಲ್ಲಾಡಳಿತದ ನಿಯಂತ್ರಣದಲ್ಲಿರುವ ಎಲ್ಲಾ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿನ ಅಪಾಯಗಳು, ನಿರ್ವಹಿಸುವ ವಿಧಾನ ಲಭ್ಯವಿರುವ ಸಂಪನ್ಮೂಲ ಇತ್ಯಾದಿಗಳ ಬಗ್ಗೆ ಮಾಹಿತಿ ಹೊಂದುವುದು ಹಾಗೂ ಅಪಾಯಕಾರಿ ಕೈಗಾರಿಕೆಗಳ ಸುತ್ತುಮುತ್ತಲಿನ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಕಾರ್ಖಾನೆಯಿಂದ ಉಂಟಾಗಬಹುದಾದ ಅಪಾಯ ಮತ್ತು ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಈ ಅಣುಕು ಪ್ರದರ್ಶನದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಪಸ್ತುತ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳಿಗೂ ದುರಂತಗಳ ನಿಯಂತ್ರಣ ಮತ್ತು ಮರುಕಳಿಸದಂತೆ ಅಗತ್ಯ ಕ್ರಮಗಳ ನಿರಂತರ ಅನುಷ್ಟಾನದ ಬಗ್ಗೆ ಪರಿಣಾಮಕಾರಿ ಸಂದೇಶವನ್ನು ನೀಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಅಣುಕು ಪ್ರದರ್ಶನದ ಚಿತ್ರಣ: ದೇವನಗೊಂಥಿ ಐಓಸಿಎಲ್‌ನ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಸಂಗ್ರಹಣಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಕಾರ್ಖಾನೆ ಸಿಬ್ಬಂದಿಗಳು ನಿಯಂತ್ರಿಸಲಾಗದೆ, ಜಿಲ್ಲಾಡಳಿತದ ಮೊರೆ ಹೋದಾಗ, ಜಿಲ್ಲಾಧಿಕಾರಿಯವರು ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ತುರ್ತು ಪರಿಸ್ಥಿತಿ ಘೋಷಿಸಿದರು. ನಂತರ ದೇವಲಾಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತೆರೆಯಲಾದ ಕಂಟ್ರೋಲ್ ರೂಂ ಮೂಲಕ ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಯವರು ಸಂಪರ್ಕ ಸಾಧಿಸಿ, ಕಾರ್ಯ ಪ್ರವೃತ್ತರನ್ನಾಗಿಸಿ, ಅವಘಡ ನಡೆದ ಸ್ಥಳಕ್ಕೆ ಧಾವಿಸಿ, ಸುಟ್ಟ ಗಾಯಾಳುಗಳನ್ನು ರಕ್ಷಿಸಿ, ಆ್ಯಂಬುಲೆನ್ಸ್ ಮೂಲಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಿ, ಸಕಾಲಕ್ಕೆ ಚಿಕಿತ್ಸೆ ಒದಗಿಸಲಾಯಿತಲ್ಲದೆ, ಅವಘಡ ಸಂಭವಿಸಿದ ಸ್ಥಳದ ಹತ್ತಿರದ ಗ್ರಾಮವಾದ ಕಣೇಕಲ್ಲು ಗ್ರಾಮಸ್ಥರು ಹಾಗೂ ಜಾನುವಾರಗಳನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ತುರ್ತು ಪರಿಸ್ಥಿತಿಯನ್ನು ಹಿಂಪಡೆದು, ಆದೇಶಿಸಿದರು. 

ಕಾರ್ಯಕ್ರಮದಲ್ಲಿ ಕಾರ್ಖಾನೆಗಳು, ಬಾಯ್ಲರ್‌ಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಜಂಟಿ ನಿರ್ದೇಶಕ ನವನೀತ್ ಮೋಹನ್, ಉಪ ನಿರ್ದೇಶಕ ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಹೊಸಕೋಟೆ ತಾಲ್ಲೂಕು ತಹಶೀಲ್ದಾರ್ ಗೀತಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್‌ಗೌಡ, ಡಿವೈಎಸ್ಪಿ ಉಮಾಶಂಕರ್, ದೇವನಗೊಂಥಿ ಹಾಗೂ ವಾಗಟ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞೆ ಡಾ. ವಿನುತಾ, ದೇವನಗೊಂಥಿಯ ತೈಲ ಮಾರುಕಟ್ಟೆ ಕಂಪನಿಗಳ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್, ಅಗ್ನಿ ಶಾಮಕ, ಗೃಹ ರಕ್ಷಕ ದಳ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!