ಹಾವೇರಿ: ಕೋವಿಡ್‍ನಿಂದ ರಾಜ್ಯ ಸೇರಿದಂತೆ ಇಡಿ ಜಗತ್ತು ಆರ್ಥಿಕ ಕುಸಿತ ಕಂಡು ಸಂಕಷ್ಟದಲ್ಲಿದೆ. ಇಂತಹ ಸಂಕಷ್ಟ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೋವಿಡ್‍ನಿಂದ ಮೃತಪಟ್ಟ ಕುಟುಂಬಕ್ಕೆ ರೂ.50 ಸಾವಿರ ಹಾಗೂ ರಾಜ್ಯ ಸರ್ಕಾರ ತಲಾ ರೂ. ಒಂದು ಲಕ್ಷ ಪರಿಹಾರ ನೀಡುವ ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಹೇಳಿದರು.
ರಾಣೆಬೆನ್ನೂರು ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ನಡೆದ ರಾಣೇಬೆನ್ನೂರ ಮತ್ತು ಬ್ಯಾಡಗಿ ತಾಲೂಕಿನ ಕೋವಿಡ್‍ನಿಂದ ಮೃತರಾದವರ ಕುಟುಂಬಗಳಿಗೆ ಪರಿಹಾರ ಚೆಕ್ ನೀಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ ಮಾತನಾಡಿದ ಅವರು,
ಡಿಸೆಂಬರ್ 2019ರಿಂದ ಆರಂಭವಾದ ಕೋವಿಡ್ ಇನ್ನೂ ಮುಗಿದಲ್ಲ. ಇನ್ನು ಮುಂದುವರೆದಿದೆ. ಸಂಕಷ್ಟ ಪರಿಸ್ಥಿತಿಯಲ್ಲಿಯೂ ಸಹ ಪ್ರಥಮವಾಗಿ ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ರಾಜ್ಯಾದ್ಯಂತ ಪರಿಹಾರ ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‍ನಿಂದ 36 ಸಾವಿರ ಜನ ಮೃತಪಟ್ಟಿದ್ದಾರೆ. ದೇಶದ ಯಾವ ರಾಜ್ಯದಲ್ಲೂ ಪರಿಹಾರ ನೀಡುತ್ತಿಲ್ಲ, ನಮ್ಮ ರಾಜ್ಯದಲ್ಲಿ ಮಾತ್ರ ನೀಡಲಾಗುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ರೈತರ ಪರವಾಗಿದ್ದು, ಆರ್ಥಿಕ ಸಂಕಷ್ಟದಲ್ಲೂ ನೀರಾವರಿ ಕಾಮಗಾರಿಗಳು ಸ್ಥಗಿತಗೊಳ್ಳದಂತೆ ನೋಡಿಕೊಂಡಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ರೂ.206 ಕೋಟಿ ಮಂಜೂರು ಮಾಡಲಾಗಿದೆ. ಅತಿವೃಷ್ಟಿ ಮನೆಹಾನಿಗೆ ರೂ.ಐದು ಲಕ್ಷ ನೀಡಲಾಗುತ್ತಿದೆ. ಅತಿವೃಷ್ಟಿ ಬೆಳೆಹಾನಿ ಪರಿಹಾರವನ್ನು ಕೇಂದ್ರದ ಎನ್.ಡಿ.ಆರ್.ಎಫ್. ಪರಿಹಾರದ ಜೊತೆಗೆ ಅದೇ ಪ್ರಮಾಣದಲ್ಲಿ ರಾಜ್ಯ ಸರ್ಕಾರದ ವತಿಯಿಂದಲೂ ಪರಿಹಾರದ ಸೇರಿ ದ್ವಿಗುಣ ಮೊತ್ತದ ಹಣ ನೀಡಲಾಗುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯಡಿ ರೈತರ ಮಕ್ಕಳಿಗೆ ಪಿ.ಯು.ಸಿ.ನಂತರ ಉನ್ನತ ವ್ಯಾಸಂಗಕ್ಕೆ ರೂ.2500 ರಿಂದ ರೂ.11 ಸಾವಿರವರೆಗೆ ಸ್ಕಾಲರಶಿಪ್ ನೀಡಲಾಗುತ್ತಿದೆ. ಅದೇ ರೀತಿ 8,9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ರೈತರ ಹೆಣ್ಣು ಮಕ್ಕಳಿಗೆ ರೂ. ಮೂರು ಸಾವಿರ ಸ್ಕಾಲರ್‍ಶಿಪ್ ವಿತರಣೆ ತೀರ್ಮಾನಿಸಲಾಗಿದೆ ಎಂದರು.
ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಕ್ಯಾಬಿನೆಟ್‍ನಲ್ಲಿ ಐದು ಲಕ್ಷ ಮನೆಗಳನ್ನು ನೀಡಲು ತೀರ್ಮಾನಿಸಲಾಗಿದೆ. 25ಕ್ಕಿಂತ ಹೆಚ್ಚಿಗೆ ಸದಸ್ಯರಿರುವ ಗ್ರಾಮ ಪಂಚಾಯತಿಗಳಿಗೆ 50 ಮನೆ, 15 ಕ್ಕಿಂತ ಹೆಚ್ಚಿನ ಸದಸ್ಯರಿಗೆ ಗ್ರಾಮ ಪಂಚಾಯತಿಗೆ 40 ಮನೆ ಹಾಗೂ 15 ಕ್ಕಿಂತ ಕಡಿಮೆ ಸದಸ್ಯರಿರುವ ಗ್ರಾಮ ಪಂಚಾಯತಿಗೆ 30 ಮನೆಗಳನ್ನು ನೀಡಲು ತೀರ್ಮಾನಿಸಲಾಗಿದೆ. ರೈತರ ಪಂಪಸೆಟ್ ಹಾಗೂ ಯಂತ್ರೋಪಕರಣಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ ನೀರಾವರಿಗೆ ಶೇ.90ರಷ್ಟು ಸಬ್ಸಿಡಿ ನೀಡಲು ಮಾನ್ಯಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಹಾಗೂ ಜನರ ಧ್ವನಿಯಾಯಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆರ್.ಶಂಕರ ಮಾತನಾಡಿ, ಬೆಂಗಳೂರ ಮಾದರಿಯಲ್ಲಿ ರಾಣೇಬೆನ್ನೂರ ನಗರವನ್ನು ಅಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಹೊಸ ಸರ್ಕಾರ ರಚನೆ ಮಾಡಲು ನಾನು ತ್ಯಾಗ ಮಾಡಿದ್ದೇನೆ. ನನ್ನ ಕನಸು ನನಸು ಮಾಡಲು ರಾಣೇಬೆನ್ನೂರಿಗೆ ಹೆಚ್ಚಿನ ಅನುದಾನ ನೀಡಲು ಮುಖ್ಯಮಂತ್ರಿಗಳಿಗೆ ಕೋರುತ್ತೇನೆ ಎಂದು ಹೇಳಿದರು.
ರಾಣೇಬೆನ್ನೂರ ಕ್ಷೇತ್ರದ ಶಾಸಕ ಅರುಣಕುಮಾರ ಗುತ್ತೂರ ಅವರು ಮಾತನಾಡಿ, ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಣೇಬೆನ್ನೂರ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಎಲ್ಲ ನೆರವು ನೀಡಿದೆ. ರೂ. 20 ಕೋಟಿ ವೆಚ್ಚದಲ್ಲಿ ಹಳೆಯ ರಾಷ್ಟ್ರೀಯ ಹೆದ್ದಾರಿ ಸುಧಾರಣೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ. ರೂ. ಐದು ಕೋಟಿ ವೆಚ್ಚದಲ್ಲಿ ರಸ್ತೆ ಅಗಲೀಕರಣ, ದ್ವಿಭಾಜಕ ಮತ್ತು ಡಾಂಬೀಕರಣ, ಬೀದಿದೀಪ ಅಳವಡಿಕೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ರೂ. 206 ಕೋಟಿ ವೆಚ್ಚದಲ್ಲಿ ಮೆಡ್ಲೇರಿ ಹಾಗೂ ಹೊಳೆಆನ್ವೇರಿ ಕೆರೆ ತುಂಬಿಸುವ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು. ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆ ಅರಿತು 600 ಎಲ್.ಪಿ.ಎಂ. ಮೆಡಿಕಲ್ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್‍ನ್ನು ಗ್ರಾಸಿಂ ನೆರವಿನಿಂದ ನಿರ್ಮಾಣ ಮಾಡಲಾಗಿದೆ. ಹಾಗೂ ಸರ್ಕಾರದ ವತಿಯಿಂದ ಮೆಡಿಕಲ್ ಆಕ್ಸಿಜನ್ ಘಟಕವನ್ನು ಸ್ಥಾಪಿಸಲಾಗಿದೆ. ಇದನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿದೆ. ಬರುವ ದಿನಗಳಲ್ಲಿ ರಾಣೇಬೆನ್ನೂರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಸಮಾರಂಭದಲ್ಲಿ ಬ್ಯಾಡಗಿ ಮತ್ತು ರಾಣೇಬೆನ್ನೂರ ತಾಲೂಕಿನಲ್ಲಿ ಕೋವಿಡ್‍ನಿಂದ ಮೃತರಾದ ಕುಟುಂಬಗಳಿಗೆ ತಲಾ ರೂ. ಒಂದು ಲಕ್ಷ ಪರಿಹಾರ ವಿತರಿಸಲಾಯಿತು.
ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ ಅವರು ಮಾತನಾಡಿ, ಬ್ಯಾಡಗಿ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ನಿಗಿಸಲು ರೂ.110 ಕೋಟಿ ವೆಚ್ಚದ ಯೋಜನೆ ಮಂಜೂರ ಮಾಡಲಾಗಿದೆ. ಆಣೂರು, ಜೋಯಿಸರಹಳ್ಳಿ, ಕಬ್ಬೂರ ಹಾಗೂ ದೇವಗಿರಿ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಸಮಾರಂಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಇತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….