ಯಲಹಂಕ: ಬಿಇಒ ಟಿ.ಎನ್. ಕಮಲಾಕರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೊಡಿಗೇಹಳ್ಳಿಯ ಮನೆಯಲ್ಲಿ ನಡೆದಿದೆ. ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಕಮಲಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅನಾರೋಗ್ಯ ಪೀಡಿತರಾಗಿದ್ದ ಬಿಇಒ ಟಿ.ಎನ್.ಕಮಲಾಕರ್ ಅವರು ಮನನೊಂದು ಡೆತ್ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆತ್ಮಹತ್ಯೆ ಮುನ್ನ ಡೆತ್ ನೋಟ್ ಬರೆದಿಟ್ಟುಕೊಂಡಿದ್ದಾರೆ. ಅನಾರೋಗ್ಯದ ಸಮಸ್ಯೆ ಸಾಕಷ್ಟು ಕಾಡ್ತಿತ್ತು. ಇದುವರೆಗೆ 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ. ಅನಾರೋಗ್ಯದಿಂದ ಜೀವನವೇ ಸಾಕು ಅನ್ನಿಸಿದೆ. ನನ್ನ ಕುಟುಂಬದವರು ಇಲ್ಲಿಯವರೆಗೆ ನೋಡಿಕೊಂಡಿರೋದು ನಿಜಕ್ಕೂ ನನ್ನ ಅದೃಷ್ಟ. ಆದ್ರೆ ಅವರಿಗೆ ಇನ್ನೂ ಹೆಚ್ಚು ನೋವು ಕೊಡೋಕೆ ನನಗೆ ಇಷ್ಟ ಇಲ್ಲ. ನಮ್ಮ ಮನೆಯವರು ಎಲ್ಲರೂ ತುಂಬಾ ಒಳ್ಳೆಯವರು. ಇನ್ಮುಂದೆ ಯಾರಿಗೂ ತೊಂದರೆ ಕೊಡಬಾರದು ಅಂತ ಈ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಕಮಲಾಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಇಒ ಟಿ.ಎನ್.ಕಮಲಾಕರ್ ಒಳ್ಳೆಯ ಅಧಿಕಾರಿಯಾಗಿದ್ದರು. ಕಳೆದ 3-4 ವರ್ಷಗಳಿಂದ ಬಿಇಒ ಆಗಿ ಕೆಲಸ ಮಾಡುತ್ತಿದ್ದರು. ಈ ರೀತಿಯಾಗಿರೋದು ನಮ್ಮ ಇಲಾಖೆಗೆ ಬಹಳ ದೊಡ್ಡ ನಷ್ಟ. ಅವರಿಗೆ ಕಾಯಿಲೆ ಇರುವ ಬಗ್ಗೆ ಈಗಲೇ ನನಗೆ ಗೊತ್ತಾಗಿದ್ದು. ಆದ್ರೆ ಈ ರೀತಿ ಮಾಡಿಕೊಳ್ತಾರೆ ಎಂದು ಅಂದುಕೊಂಡಿರಲಿಲ್ಲ. ಒಬ್ಬ ಒಳ್ಳೆ ಅಧಿಕಾರಿಯನ್ನ ನಮ್ಮ ಇಲಾಖೆ ಕಳೆದುಕೊಂಡಿದೆ ಎಂದು ಯಲಹಂಕ ಡಿಡಿಪಿಐ ನಾರಾಯಣ್ ಬೇಸರ ವ್ಯಕ್ತಪಡಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….