ದಿನ ಭವಿಷ್ಯ: ಭಾನುವಾರ, ಡಿಸೆಂಬರ್ 26, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ, ಸಮಾಧಾನ ಚಿತ್ತದಿಂದ ವರ್ತಿಸಿ

ಮೇಷ: ಆಸ್ತಿ ವಿವಾದ, ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾ ಸಮಾಜ ಕೀರ್ತಿ ಲಭಿಸುವುದು.

ವೃಷಭ: ಪ್ರಯತ್ನಕ್ಕೆ ತಕ್ಕ ಫಲ, ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು.

ಮಿಥುನ: ಕೆಲಸದ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.

ಕಟಕ: ಆತಂಕ, ಹಿತ ಶತೃಗಳು. ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.

ಸಿಂಹ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ಕನ್ಯಾ: ಹಣ ವ್ಯಯ. ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.

ತುಲಾ: ಮಕ್ಕಳಿಂದ ಶುಭಸುದ್ದಿ. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

ವೃಶ್ಚಿಕ: ಹೊಸ ಉದ್ಯೋಗ ಚಿಂತೆ. ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವುದು.

ಧನಸ್ಸು: ಕೋಪಾ ತಾಪಾ, ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.

ಮಕರ: ಮುಜುಗರದ ಸ್ಥಿತಿ ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು.

ಕುಂಭ: ಶುಭ ಸುದ್ದಿ ಬರುವುದು. ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ಮೀನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ, ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.

ತಿಥಿ: ಸಪ್ತಮಿ 

ನಕ್ಷತ್ರ: ಉತ್ತರಾ ನಕ್ಷತ್ರ 

 ರಾಹುಕಾಲ: 04:41 ರಿಂದ 06:06

ಗುಳಿಕಕಾಲ: 03:15 ರಿಂದ 04:41

ಯಮಗಂಡಕಾಲ: 12:24 ರಿಂದ 01:49

ಈ ದಿನದ ವಿಶೇಷ: ಶ್ರೀಮಾತೆ ಶ್ರೀ ಶಾರದಾದೇವಿ ಜಯಂತಿ 

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

"ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ"; ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110590"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ.. ಯುವತಿ ಸಾವು!

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ.. ಯುವತಿ ಸಾವು!

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ (Murder) ಘಟನೆ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="110588"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!