ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣದ) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಶ್ರೀನಿವಾಸ್ ತರಿದಾಳ್ ಅವರನ್ನು ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ನೇಮಕ ಮಾಡಿದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದ ಸಮೀಪವಿರುವ ಆಫೀಸರ್ಸ್ ಕ್ಲಬ್ ನಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ರಾಜ್ಯದಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗುತ್ತಿದೆ, ಯಾವ ರಾಜಕೀಯ ಪಕ್ಷಗಳು ತಮ್ಮ ಮತಕ್ಕಾಗಿಗೆ ಇಂತಹ ಸಂಘಟನೆಗಳ ಬಗ್ಗೆ ಮಾತನಾಡದಿರುವುದು ನಾಡಿನ ದುರ್ದೈವ. ಇಂತಹ ನಾಡದ್ರೋಹಿ ಸಂಘಟನೆಗಳನ್ನು ನಿಯಂತ್ರಣ ಕನ್ನಡ ನಾಡಿನ ಎಲ್ಲಾ ಕನ್ನಡ ಪರ ಸಂಘಟನೆಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಎಲ್ಲಾ ಸಂಘಟನೆಗಳು ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ ಆರಾಧ್ಯ, ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….