ಮೇಷ: ಆಕಸ್ಮಿಕ ಧನಲಾಭವಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
ವೃಷಭ: ತೋರ್ಪಡಿಕೆ ಬೇಡ. ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ. ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು.
ಮಿಥುನ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಯೋಗ್ಯತೆ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವುದು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.
ಸಿಂಹ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.
ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವುದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರೆಯಿರಿ.
ತುಲಾ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.
ವೃಶ್ಚಿಕ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವುದು.
ಧನಸ್ಸು: ಅನಾವಶ್ಯಕ ತಿರುಗಾಟದಿಂದ ಆಲಸ್ಯ. ದುರ್ಜನರ ಸಹವಾಸ ದೋಷ ಕಂಡುಬರುವುದು. ಐಷಾರಾಮಿ ವಸ್ತುಗಳ ಖರೀದಿ ಸಂಭವ. ವ್ಯಾಪಾರ-ಉದ್ಯಮಗಳಲ್ಲಿ ತೃಪ್ತಿದಾಯಕ ಲಾಭವಿರುವುದು. ವಿದ್ಯಾರ್ಥಿಗಳಿಗೆ ಹಿನ್ನಡೆ ಇರುವುದು.
ಮಕರ: ಸಹೋದ್ಯೋಗಿ ಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.
ಕುಂಭ: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕ ವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕ್ಷೀಸಿದಂತೆ ಪ್ರಗತಿ. ಲಾಭ ತೋರಿ ಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.
ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವುದು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು.
ತಿಥಿ: ಅಷ್ಟಮಿ
ನಕ್ಷತ್ರ: ಹಸ್ತ ನಕ್ಷತ್ರ
ಈ ದಿನದ ವಿಶೇಷ: ಕಾಲಭೈರವಾಷ್ಟಮಿ
ರಾಹುಕಾಲ: 08:06 ರಿಂದ 09:32
ಗುಳಿಕಕಾಲ: 01:49 ರಿಂದ 03:15
ಯಮಗಂಡಕಾಲ: 10:58 ರಿಂದ 12:24
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….