ಬೆಂಗಳೂರು: ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿರುವ ಅವರು ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ.
ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು..?
2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್.ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು.
ನಮಗೆ ಇಂತಹ ಮನುಷ್ಯ ವಿರೋಧಿ ಕಾನೂನಿನಲ್ಲಿ ಹಿಂದೆಯೂ ಆಸಕ್ತಿ ಇರಲಿಲ್ಲ, ಈಗಲೂ ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….