ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ.1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಿಸಿದರು.

ಇಂದು  ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್ಸು ಮತ್ತು ಬಿಎಸ್-6 ಡೀಸೆಲ್ ಬಸ್ಸುಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು,ಈ ದಿಸೆಯಲ್ಲಿ ಬಿಎಂಟಿಸಿಯ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲನೀಡುವುದು ಎಂದು ತಿಳಿಸಿದರು.

ಸಾರಿಗೆ ಹಾಗೂ ಎಸ್ಕಾಂ ಸಂಸ್ಥೆ ಪುನಶ್ಚೇತನಗೊಳಿಸುವುದು ಸರ್ಕಾರದ ಸಂಕಲ್ಪ: ಸಬ್ಸಿಡಿ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟಸಾಧ್ಯ. ಅದಕ್ಕಾಗಿ ರಾಜ್ಯದ ಎಲ್ಲ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ.

ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಜನೆಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಈ ಸಮಿತಿ ತನ್ನ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಂತೆಯೇ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಮಾಲಿನ್ಯ ರಹಿತ ಬಸ್ ಗಳು: ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯವಾಗಿದೆ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್‍ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ. ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ   ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಲು ಬೊಮ್ಮಾಯಿ ಅವರು ಮನವಿ ಮಾಡಿದರು.

ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ಜನಸ್ನೇಹಿಯಾಗಿಸುವ ಮುಖೇನ ಲಾಭದಾಯಕವಾಗುವಂತೆ ಮಾಡಬೇಕು. ಸಂಸ್ಥೆಗಳು ಆದಾಯದ ಸೋರಿಕೆಯನ್ನು ತಡೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು.

ಸಮಿತಿಯ ಸಲಹೆಗಳನ್ನು ಜಾರಿಗೆ ತರುವ ಮೂಲಕ ಸಾರಿಗೆಗೆ ಹೊಸ ಆಯಾಮ ನೀಡುವ ಕೆಲಸ ಮಾಡಬೇಕು ಎಂದರು. ಹಿಂದೆ ಸಾರ್ವಜನಿಕ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿಎಂಟಿಸಿ ಸೇವೆ ಪಡೆಯುತ್ತಿದ್ದವು. ಮುಂದಿನ ದಿನಗಳಲ್ಲಿ ಹೆಚ್‍ಎಎಲ್-ಮತ್ತಿತರ ಸಾರ್ವಜನಿಕ ಉದ್ದಿಮೆಗಳು ಹಾಗೂ ಐಟಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಬಿಎಂಟಿಸಿ ಸೇವೆಯನ್ನು ಬಳಸುವ ಬಗ್ಗೆ ಮನವೊಲಿಸಲಾಗುವುದು ಎಂದರು.

ಹೊಸ ಪ್ರಯೋಗ ಮಾಡಿ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರಿಗೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸಹಕಾರ ನೀಡಿದರೆ ಫಲಪ್ರದವಾಗುವುದು.

ಬಿಎಂಟಿಸಿ ಬದಲಾಗಿ ಹೊಸ ವಿನ್ಯಾಸ ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಾರಿಗೆ ಸಚಿವ ಬಿ.ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪಿ.ಸಿ. ಮೋಹನ್ ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಶಾಸಕರು, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!