ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ.
ವೃಷಭ: ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವುದು. ಆಸೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು.
ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು.
ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.
ಸಿಂಹ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ಕನ್ಯಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ, ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
ವೃಶ್ಚಿಕ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವುದು. ಗೋ-ಸೇವೆಯಿಂದ ಕಷ್ಟಪರಿಹಾರ.
ಧನಸ್ಸು: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳ ಕಾರ್ಯ ನಿರೀಕ್ಷೆ , ಹೆಸರು ಬೇಳೆ , ಕಡಲೆ ಬೇಳೆ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದಲ್ಲಿ ದಾನ ಮಾಡಿ.
ಮಕರ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.
ಕುಂಭ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ.
ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ.
ತಿಥಿ: ನವಮಿ
ನಕ್ಷತ್ರ: ಚಿತ್ತ
ರಾಹುಕಾಲ: 03:16 ರಿಂದ 04:42
ಗುಳಿಕಕಾಲ: 12:25 ರಿಂದ 01:50
ಯಮಗಂಡಕಾಲ: 09:33 ರಿಂದ 10:59
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….