ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಕರ್ನಾಟಕ ಜೀವ ವೈವಿಧ್ಯ ಮಂಡಳಿವತಿಯಿಂದ ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಂಗಳವಾರ ಬೆಂಗಳೂರು ವೃತ್ತದ ಅರಣ್ಯ ಅಧಿಕಾರಿಗಳು ಹಾಗೂ ಮುಂಚೂಣಿ ಸಿಬ್ಬಂದಿಗೆ ಔಷಧೀಯ ಸಸ್ಯಗಳ ಸಂರಕ್ಷಣೆ,ಸುಸ್ಥಿರ ನಿರ್ವಹಣೆ ಮತ್ತು ಜೈವಿಕ ವೈವಿಧ್ಯ ಕಾಯ್ದೆ 2002ರ ಕುರಿತಾದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಾಗಾರದ ಅಂಗವಾಗಿ ಔಷಧೀಯ ಸಸ್ಯಗಳ ಪ್ರಾಮುಖ್ಯತೆ ಮತ್ತು ಮೌಲ್ಯ, ಔಷದೀಯ ಸಸ್ಯಗಳ ಸಂರಕ್ಷಣೆ, ಆಕ್ರಮಣಕಾರಿ ವಿದೇಶಿ ಸಸ್ಯಗಳು ವಿಷಯಗಳ ಕುರಿತು ತಿಳಿಸಲಾಯಿತು.ಸುಮಾರು 80ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಈ ವೇಳೆ ಅರ್.ಎಲ್.ಜೆ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೆ.ನಾಗೇಂದ್ರ ಸ್ವಾಮಿ ,ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುಭಾಷ್ ಕೆ ಮಾಲ್ಟೇಡ, ಸುದರ್ಶನ್.ಜಿ ಎ., ಅನಿತಾ ಎಸ್.ಅರೇಕಲ್, ಬಿ.ವೆಂಕಟೇಶ್, ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ ರೆಡ್ಡಿ ಹಾಗೂ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….