ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮವು ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಮುಖ್ಯ ಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆ (CMKKY) ಕಾರ್ಯಕ್ರಮದ ಮೂಲಕ ಹೊಸ ಕೌಶಲ್ಯ ಕಲಿಕೆ ಹಾಗೂ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ನೀಡಲು ಅರ್ಹ ಹಾಗೂ ಆಸಕ್ತ ಸರ್ಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು/ ಕಾರ್ಖಾನೆಗಳು/ ವಿದ್ಯಾ ಸಂಸ್ಥೆಗಳು ನೋಂದಾಯಿಸಿಕೊಳ್ಳಬಹುದು.
ಅರ್ಹ ಹಾಗೂ ಆಸಕ್ತ ಸರ್ಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು/ ಕಾರ್ಖಾನೆಗಳು/ ವಿದ್ಯಾ ಸಂಸ್ಥೆಗಳು ವೆಬ್ ಸೈಟ್ www.kaushalkar.com ನಲ್ಲಿ TP (Training Provider) ಮತ್ತು TC (Training Centre) ಆಗಿ ನೋಂದಾಯಿಸಿಕೊಳ್ಳಬಹುದಾಗಿದ್ದು, ನೋಂದಾಯಿಸಿಕೊಂಡ ಸಂಸ್ಥೆಗಳಿಗೆ ತರಬೇತಿಯ ಗುರಿಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ/ ನೋಂದಣಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿ, ಜಿಲ್ಲಾ ಸಂಕೀರ್ಣ, ಕೊಠಡಿ ಸಂಖ್ಯೆ: 117, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ -562110, ದೂ.ಸಂ.: 080-29560045, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ಮೊ.ಸಂ.: 8970122219, 9986868682, 9916852249 ಹಾಗೂ ಇ-ಮೇಲ್ ವಿಳಾಸ: [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….