ಹುಬ್ಬಳ್ಳಿ: ಇತರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ.
ಬಜೆಟ್ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಈ ಕುರಿತು ಘೋಷಿಸಿರುವ ಅವರು, ಅನ್ಯ ಪ್ರಾರ್ಥನಾ ಮಂದಿಗಳಿಗೆ ಹೋಲಿಸಿದರೆ ನಮ್ಮ ದೇವಲಾಯಗಳಿಗೆ ಕಟ್ಟುಪಾಡು ಹೆಚ್ಚಿದೆ. ನಮ್ಮ ದೇವಾಲಯದಿಂದ ಹಣ ಪಡೆದು ಅದೇ ದೇವಾಲಯದ ಅಭಿವೃದ್ಧಿಗೆ ಮೇಲಿನ ಅಧಿಕಾರಿಗಳ ಅನುಮತಿ ಪಡೆಯಬೇಕಿದೆ.
ನಮ್ಮವರ ಬಹು ದೊಡ್ಡ ಬೇಡಿಕೆಯಾಗಿರುವ ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆಗೆ ಅವಕಾಶ ಮಾಡಿಕೊಡ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಏನೂ ಇರಲ್ಲ.
ದೇಗುಲಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸ್ತೇವೆ. ಮಂದಿರಗಳ ವಿಚಾರ ಬಂದಾಗ ಸರ್ಕಾರ ಒಂದು ಕಾನೂನು ತಂದಿದೆ. ಇದು ನಮ್ಮ ಬದ್ಧತೆ, ತಕ್ಷಣ ಸ್ಪಂದಿಸುವುದು ಸರ್ಕಾರದ ಬದ್ಧತೆ. ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಆಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ ಅದನ್ನು ಜಾರಿಗೆ ತರುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿರುವಾಗಲೇ ಅದನ್ನು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….