ದೊಡ್ಡಬಳ್ಳಾಪುರ: ನಿತಿನ್ ಗೌಡ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ತಿಪ್ಪೂರು ಪಂಚಾಯಿತಿಯ ಒಂದು ಸ್ಥಾನಕ್ಕೆ ಡಿ.27ರಂದು ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಫಲಿತಾಂಶ ಪ್ರಕಟವಾಗಿದೆ.
ಚಲಾವಣೆಯಾದ 734 ಮತಗಳಲ್ಲಿ ಚನ್ನರಾಮಯ್ಯ (ಚಂದ್ರಾಮ) 399 ಮತ ಪಡೆದಿದ್ದು, ಬೈರೇಗೌಡ ಎಂ 322 ಮತ ಪಡೆದಿದ್ದಾರೆ.13ಮತಗಳು ತಿರಸ್ಕೃತವಾಗಿವೆ.
ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಚೆನ್ನರಾಮಯ್ಯ 399 ಮತಗಳನ್ನು ಪಡೆದು 77ಮತಗಳ ಅಂತರದಿಂದ ಗೆಲುವನ್ನು ಪಡೆದಿದ್ದಾರೆಂದು ಚುನಾವಣೆ ಅಧಿಕಾರಿ ಹರೀಶ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….