ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2022ರ ಜನವರಿ 30ರವರೆಗೆ ದಿನಾಂಕ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ದೃಢೀಕೃತ ದಾಖಲಾತಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು.
ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ವೆಬ್‍ಸೈಟ್ www.sw.kar.nic.in ಮೂಲಕ 2022ರ ಜನವರಿ 30ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ, ದೂ.ಸಂ.: 080-7681784, ದೊಡ್ಡಬಳ್ಳಾಪುರ, ದೂ.ಸಂ.: 080-7623681, ಹೊಸಕೋಟೆ, ದೂ.ಸಂ.: 080-7931528 ಹಾಗೂ ನೆಲಮಂಗಲ, ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ ಕೃಷ್ಣಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….