ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸಮೀಪದ ವಿಶ್ವೇಶ್ವರಯ್ಯ ಪಿಕ್ ಡ್ಯಾಂನಲ್ಲಿ ನೀರು ಸಂಗ್ರಹವಾಗಲು ಅಡ್ಡಲಾಗಿ ನಿರ್ಮಿಸಲಾಗಿದ್ದ ಮಣ್ಣಿನ ದಿಬ್ಬವನ್ನು ಜೆಸಿಬಿ ಮೂಲಕ ಕಾಲುವೆ ತೋಡಿ ಡ್ಯಾಮ್ ನಲ್ಲಿ ಸಂಗ್ರಹವಾಗಿದ್ದ ಭಾರಿ ಪ್ರಮಾಣದ ನೀರನ್ನು ಹಿರಬಿಟ್ಟವರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ನಿರ್ಮಾಣ ಕಾಮಗಾರಿ ನಡೆಸಲು ಸಂಗ್ರಹವಾಗಿದ್ದ ನೀರನ್ನು, ಜೆಸಿಬಿ ಬಳಸಿ ಮಣ್ಣಿನ ದಿಬ್ಬವನ್ನ ಕಾಲುವೆ ತೋಡಿ ಅಪಾರ ಪ್ರಮಾಣದ ನೀರನ್ನು ಪೋಲು ಮಾಡಲಾಗಿದೆ.
ಈ ಕುರಿತು ಸ್ಥಳೀಯರು ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ತಹಶೀಲ್ದಾರ್ ಮೋಹನ್ ಕುಮಾರಿ ಭೇಟಿ ನೀಡಿ ಜೆಸಿಬಿ ಮಾಲೀಕನ ವಿರುದ್ಧ ದೂರು ದಾಖಲಿಸುವ ಹಾಗೂ ಜೆಸಿಬಿ ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….