ಬೆಂಗಳೂರು: ಸುವರ್ಣ ಚಾರಿಟಬಲ್ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ 2020-21ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಯನ್ನು ದೊಡ್ಡಬಳ್ಳಾಪುರ ತಾಲೂಕಿನ ಇಬ್ಬರು ಅರ್ಚಕರಿಗೆ ಇಂದು ನೀಡಲಾಗಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಧ್ಯಾತ್ಮ ವಿಭಾಗದಲ್ಲಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಪ್ರಧಾನ ಅರ್ಚಕರಾದ ವೇಧ ಬ್ರಹ್ಮ ಶ್ರೀ ಎಸ್.ಎನ್.ಸುಬ್ಬುಕೃಷ್ಣ ಶಾಸ್ತ್ರಿ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ತಾಲ್ಲೂಕು ಅಧ್ಯಕ್ಷರಾದ ವಿದ್ವಾನ್ ಎಸ್.ನವೀನ್ ಅವರಿಗೆ 2020-21ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಯನ್ನು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ವಿತರಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….