ಮೇಷ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
ವೃಷಭ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವುದು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.
ಮಿಥುನ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯ ಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.
ಕಟಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವುದು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.
ಸಿಂಹ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗೃಹ ಸೌಖ್ಯವಿರುವುದು.
ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವುದು.ಸರ್ಕಾರಿ ಕಚೇರಿಯಲ್ಲಿ ನಿಮ್ಮ ಕೆಲಸಗಳೆನಾದರೂ ಇದ್ದರೆ ಇಂದು ನಿಮ್ಮ ಪರವಾಗಿರುತ್ತದೆ.
ತುಲಾ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನ ಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.
ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಧನಸ್ಸು: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು.
ಮಕರ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲ. ಸ್ಥಾನ ಮಾನಗಳೂ ಭದ್ರವಾಗಿ, ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು.
ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಹಿರಿಯರ ಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.
ತಿಥಿ: ಚತುರ್ದಶಿ
ನಕ್ಷತ್ರ: ಜೇಷ್ಠ ನಕ್ಷತ್ರ
ರಾಹುಕಾಲ: 09:35 ರಿಂದ 11:01
ಗುಳಿಕಕಾಲ: 06:44 ರಿಂದ 08:09
ಯಮಗಂಡಕಾಲ: 01:52 ರಿಂದ 03:18
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….