ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಬೆಂಗಳೂರು ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಇವರ ಸಹಯೋಗದಲ್ಲಿಂದು ಬೆಂಗಳೂರು ನಗರ ಜಿಲ್ಲೆಯ ಜಕ್ಕೂರು ವೈಮಾನಿಕ ತರಬೇತಿ ಶಾಲೆಯಲ್ಲಿಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ನಡೆದ ಪ್ಯಾರಾಸೈಲಿಂಗ್ ಶಿಬಿರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಶಿಬಿರದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಉಪ ವಿಭಾಗಧಿಕಾರಿ ಅರುಳ್‌ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ, ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಆಯುಕ್ತ ನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….