ದೊಡ್ಡಬಳ್ಳಾಪುರ: ಓಮಿಕ್ರಾನ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಂಗಳವಾರ ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಪ್ಯೂ ಬಿಸಿ ಅನವಶ್ಯಕವಾಗಿ ರಸ್ತೆಗಿಳಿಯುವ ತಾಲೂಕಿನ ಜನರಿಗೆ ತಟ್ಟಲಾರಂಭಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಇದೀಗ ಓಮಿಕ್ರಾನ್ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಈ ನಿಟ್ಟಿನಲ್ಲಿ ಅನವಶ್ಯಕ ಓಡಾಟ ನಡೆಸುವ ಜನರಿಗೆ ಬಿಸಿ ಮುಟ್ಟಿಸುವ ಕಾರಣಕ್ಕಾಗಿ ರಾತ್ರಿ ಕರ್ಫ್ಯೂ ಜಾರಿಗೆ ತರಲಾಗಿದೆ.
ಇನ್ನು ರಾತ್ರಿ ಕರ್ಫ್ಯೂ ಯಶಸ್ವಿಗೊಳಿಸಲು ಪೊಲೀಸರು ಕಾರ್ಯನಿರ್ವಹಿಸುತ್ತಿದ್ದು, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ವಿವಿಧ ಪೊಲೀಸ್ ಠಾಣೆ ಸಿಬ್ಬಂದಿಗಳ ಸಭೆ ನಡೆಸಿ ರಾತ್ರಿ ಕರ್ಪ್ಯೂ ಯಶಸ್ವಿಗೊಳಿಸಲು ತಂತ್ರ ರೂಪಿಸಿದ್ದಾರೆ.
ಸಮಯ 10 ಗಂಟೆಯಾದ ಕೂಡಲೇ ಪೊಲೀಸರು ರಸ್ತೆಗೆ ಇಳಿಯುತ್ತಿದ್ದಾರೆ. ಪ್ರಮುಖ ಫ್ಲೈ ಓವರ್‌ಗಳನ್ನು ಬ್ಯಾರಿಕೇಡ್ ಮೂಲಕ ಬಂದ್ ಮಾಡಲಾಗುತ್ತಿದೆ. ಕಾನೂನು ಮೀರಿ ವಿನಾಕಾರಣ ಸುತ್ತಾಟ ನಡೆಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗುತ್ತಿದೆ.
ಹೊಸ ವರ್ಷಾಚರಣೆ ಹಾಗೂ ರಾತ್ರಿ ಕರ್ಪ್ಯೂ ಹಿನ್ನೆಲೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ನಗರಠಾಣೆ ಸಬ್ ಇನ್ಸ್‌ಪೆಕ್ಟರ್ ಗೋವಿಂದ್, ರಾಜಾನುಕುಂಟೆ ಸಬ್ ಇನ್ಸ್‌ಪೆಕ್ಟರ್ ಭವಿತ, ದೊಡ್ಡಬೆಳವಂಗಲ ಸಬ್ ಇನ್ಸ್‌ಪೆಕ್ಟರ್ ಜ್ಞಾನಮೂರ್ತಿ ಶುಕ್ರವಾರ ರಾತ್ರಿ 10ರ ಬಳಿಕ ಓಡಾಟ ನಡೆಸುತ್ತಿ ವಾಹನಗಳ ತಡೆದು ಪರಿಶೀಲನೆ ನಡೆಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….