ಅರ್ಹ ಮಕ್ಕಳಿಗೆ ತಪ್ಪದೇ ಲಸಿಕೆಯನ್ನು ಕೊಡಿಸಿ – ಸದೃಢ ಭಾರತ ನಿರ್ಮಾಣಕ್ಕೆ ಸಹಕರಿಸಿ: ತಹಶೀಲ್ದಾರ್ ಮೋಹನಕುಮಾರಿ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ 15 ರಿಂದ 18 ವರ್ಷದೊಳಗಿನ 12675  ಮಕ್ಕಳಿದ್ದಾರೆ. ಈ ಮಕ್ಕಳಿಗೆ ಸರ್ಕಾರದ ನಿರ್ದೇಶನದಂತೆ ಕೋವಿಡ್-19ರ ಲಸಿಕೆಯನ್ನು ನೀಡಲು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಸಕಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು, ಜನವರಿ 03 ರಿಂದ ಮಕ್ಕಳು ಓದುತ್ತಿರುವ ಶಾಲಾ ಕಾಲೇಜುಗಳಲ್ಲಿಯೇ ಲಸಿಕಾ ಕಾರ್ಯಗಳನ್ನು ಆಯೋಜಿಸಲಾಗುವುದು ಎಂದು ತಹಶೀಲ್ದಾರ್ ಮೋಹನಕುಮಾರಿ ಅವರು ತಿಳಿಸಿದ್ದಾರೆ. 

ಅವರು ಈ  ಕುರಿತು ಹರಿತಲೇಖನಿಗೆ  ಮಾಹಿತಿಯನ್ನು ನೀಡಿ, ಕೇಂದ್ರ ಸರ್ಕಾರವು ಕೋವಿಡ್-19 ಸಾಂಕ್ರಾಮಿಕವನ್ನು ದೇಶದಿಂದ ನಿರ್ಮೂಲನೆಗೊಳಿಸುವ ಪಣವನ್ನು ತೊಟ್ಟಿದ್ದು, ಈ ನಿಟ್ಟಿನಲ್ಲಿ ಜನವರಿ 3ರಿಂದ 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೋವಿಡ್-19 ಲಸಿಕೆಯನ್ನು ನೀಡುವುದಾಗಿ ಘೋಷಣೆ ಮಾಡಿರುತ್ತದೆ. ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವತಿಯಿಂದ ತಾಲೂಕಿನ 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕೋವಿಡ್-19 ಲಸಿಕೆಯನ್ನು ನೀಡಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ನಾಳೆ 74  ಶಾಲಾ ಕಾಲೇಜುಗಳಲ್ಲಿ ಲಸಿಕೆ ಹಾಕಲಾಗುವುದು ಈ ಕಾರ್ಯಕ್ರಮ ಪ್ರಯುಕ್ತ ಸಾಂಕೇತಿಕವಾಗಿ  ನಗರದ ಜೂನಿಯರ್ ಕಾಲೇಜಿನಲ್ಲಿ ನಾಳೆ 10.30ಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಅವರು ಚಾಲನೆ ನೀಡಲಿದ್ದಾರೆ.

ಪೋಷಕರು ಮಕ್ಕಳ ಮನವೊಲಿಸಲು ಮನವಿ: ಮಕ್ಕಳು ತಾವು ಓದುತ್ತಿರುವ ಶಾಲಾ ಕಾಲೇಜುಗಳಲ್ಲಿಯೇ ಲಸಿಕಾ ಸತ್ರಗಳನ್ನು ಆಯೋಜಿಸಲಾಗುವುದು. ಲಸಿಕೆ ಪಡೆಯುವ ಮಕ್ಕಳು ತಮ್ಮ ಆಧಾರ್ ಕಾರ್ಡ್ ನ್ನು  ತೋರಿಸಿ ಲಸಿಕೆಯನ್ನು ಪಡೆಯಬಹುದಾಗಿರುತ್ತದೆ. ಆಧಾರ್ ಕಾರ್ಡ್ ಇಲ್ಲದಿದ್ದಲ್ಲಿ ತಮ್ಮ ಶಾಲಾ ದಾಖಲಾತಿಗಳಲ್ಲಿ ಯಾವುದಾದರೂ ಒಂದನ್ನು ತೋರಿಸಿ ಲಸಿಕೆಯನ್ನು ಪಡೆಯಬಹುದಾಗಿರುತ್ತದೆ. ಈ ಲಸಿಕಾಕರಣದಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ವವಾಗಿದ್ದು, ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಲಸಿಕೆಯ ಕುರಿತು ಅರಿವು ಮೂಡಿಸಿ ಪ್ರತಿಯೊಂದು ಮಗುವು ಲಸಿಕೆಯನ್ನು ಪಡೆಯಲು ಪ್ರೇರೇಪಿಸಬೇಕು. ಪೋಷಕರು ಮಕ್ಕಳಲ್ಲಿ ಲಸಿಕೆ ಪಡೆಯಲು ಮನವೊಲಿಸಿ ಅಧಾರ್ ಪ್ರತಿಯನ್ನು ಮಕ್ಕಳೊಂದಿಗೆ ಕಳುಹಿಸಿಕೊಡಬೇಕೆಂದು ಮನವಿ ಮಾಡಿದರು.

ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮನ್ವಯತೆ ಸಾಧಿಸಿಕೊಂಡು ಸರ್ಕಾರ ನೀಡಿರುವ ಲಸಿಕಾಕರಣ ಗುರಿಯನ್ನು ತ್ವರಿತಗತಿಯಲ್ಲಿ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಅವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!