ದೊಡ್ಡಬಳ್ಳಾಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರ ಆಯ್ಕೆ ಸಭೆ ಜನವರಿ 2 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ನಡೆಯಲಿದೆ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದ್ದಾರೆ.
ಸಭೆಗೆ ಕಸಾಪ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲ ಸದಸ್ಯರಿಗೂ ಮುಕ್ತ ಆಹ್ವಾನವಿದ್ದು, ನಿಗಧಿತ ಸಮಯಕ್ಕೆ ಹಾಜರಾಗಿ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳು, ತಾಲೂಕು ಪದಾಧಿಕಾರಿಗಳ ಆಯ್ಕೆ ಸೇರಿದಂತೆ ರಚನಾತ್ಮಕ ಚಟುವಟಿಕೆಗಳಿಗೆ ಪೂರಕವಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಅವರು ಕೋರಿದ್ದಾರೆ.
ಜಿಲ್ಲಾಧ್ಯಕ್ಷರಿಗೆ ಅಭಿನಂದನೆ: ಇದೇ ವೇಳೆ ಬೆಂ.ಗ್ರಾ ಜಿಲ್ಲಾ ಕಸಾಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಎನ್.ಕೃಷ್ಣಪ್ಪ ಅವರಿಗೆ ದೊಡ್ಡಬಳ್ಳಾಪುರದ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳ ಪರವಾಗಿ ಅಭಿನಂದನಾ ಕಾರ್ಯಕ್ರಮವೂ ಆಯೋಜನೆಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….