ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಜನರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಆಸ್ತಿ ನೋಂದಣಿಗೆ ಕಂದಾಯ ಇಲಾಖೆ ವಿಶೇಷ ರಿಯಾಯತಿ ಪ್ರಕಟಿಸಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ, ಹೊಸ ವರ್ಷದ ಮೊದಲ ದಿನವೇ ಸರ್ಕಾರ ಈ ರಿಯಾಯಿತಿಯನ್ನು ಜನರ ಅನುಕೂಲಕ್ಕಾಗಿ ನೀಡುತ್ತಿದೆ. ಇಂದಿನಿಂದಲೇ ಈ ಸೌಲಭ್ಯವನ್ನು ಜನರು ಪಡೆದುಕೊಳ್ಳಬಹುದು. ಇದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ಸ್ವಲ್ಪ ಆದಾಯ ಕಡಿಮೆ ಆಗಬಹುದು. ಆದರೆ ಲಕ್ಷಾಂತರ ಜನರಿಗೆ ಇದು ಅನುಕೂಲವಾಗುತ್ತದೆ ಎಂದರು.
ಅಗ್ರಿಮೆಂಟ್, ಜಿಪಿಎ ಮಾಡಿಕೊಂಡಿದ್ದ ರೈತರು ಈಗ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನಗಳು, ಕಟ್ಟಡಗಳು, ಅಪಾರ್ಟ್‌ಮೆಂಟ್ ಹಾಗೂ ಇತರ ಎಲ್ಲ ರೀತಿಯ ಸ್ಥಿರಾಸ್ತಿಗಳ ನೋಂದಣಿ ಮಾರ್ಗಸೂಚಿ ದರವನ್ನು ಶೇ. 10 ರಷ್ಟು ಕಡಿತಗೊಳಿಸಲಾಗಿದೆ. ಈ ರಿಯಾಯಿತಿ ಜ.1ರಿಂದ ಮಾರ್ಚ್ ಅಂತ್ಯದವರೆಗೆ ಮಾತ್ರ ಲಭ್ಯ ಇರುತ್ತದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….