News update: ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾಗಿ ಪಿ.ಗೋವಿಂದರಾಜು ಆಯ್ಕೆ

ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಪಿ.ಗೋವಿಂದರಾಜು ಆಯ್ಕೆಯಾಗಿದ್ದಾರೆ.

ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ   ಬಿ.ಎನ್.ಕೃಷ್ಣಪ್ಪ  ಸದಸ್ಯರ ಸಮ್ಮುಖದಲ್ಲಿ ಆಯ್ಕೆಯನ್ನು ಪ್ರಕಟಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ  ಅವರು, ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಅಸ್ತಿತ್ವ ಹಾಗೂ ಇತಿಹಾಸವಿದ್ದು, ಪರಿಷತ್ತಿನ ಆಶಯ ಉದ್ದೇಶಗಳಿಗೆ ದಕ್ಕೆ ಬಾರದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ದೊಡ್ಡಬಳ್ಳಾಪುರ ತಾಲೂಕು ಹೋರಾಟಕ್ಕೆ ಹೆಸರಾಗಿದ್ದು, ಸಾಹಿತ್ಯ, ಸಂಸ್ಕೃತಿ ರಾಜಕೀಯ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿದ್ದಾರೆ.

ಇತ್ತೀಚೆಗೆ ನಿಧನರಾದ ಹಿರಿಯ ರಾಜಕೀಯ ಮುತ್ಸದ್ದಿ ಆರ್.ಎಲ್.ಜಾಲಪ್ಪ, ಸಾಹಿತ್ಯ ವಿಮರ್ಶಕ ಡಿ.ಆರ್.ನಾಗರಾಜ್ ದೊಡ್ಡಬಳ್ಳಾಪುರ ಮೂಲದವರೇ ಆಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸ್ಮರಿಸಿದರು.

ನಿಯಮಾನುಸಾರ ಆಯ್ಕೆ: ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ಪ್ರಕಾರ, ಪದಾಧಿಕಾರಿಗಳ ಆಯ್ಕೆ ನಡೆಯಬೇಕಿದೆ ಎಂದು ವಿವರಿಸಿದ ಅವರು,  ಜಿಲ್ಲೆಯಲ್ಲಿ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ. ಕಸಾಪ ಸದಸ್ಯರ ಸಭೆಯಲ್ಲಿ, ಸದಸ್ಯರ ಸಮ್ಮುಖದಲ್ಲಿ, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳನ್ನು ಗಣನೆಗೆ ತೆಗೆದುಕೊಂಡು, ಸದಸ್ಯರ ಒಮ್ಮತದಿಂದ ಆಯ್ಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ  ಗಣನೆಗೆ ತೆಗೆದುಕೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ತಿಂಗಳ ಕಾರ್ಯಕ್ರಮಗಳು, ಸಮ್ಮೇಳನಗಳನ್ನು ಹಾಗೂ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಗೋವಿಂದರಾಜು ಮಾತನಾಡಿ, ದೊಡ್ಡಬಳ್ಳಾಪುರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಹೋರಾಟಗಳಿಗೆ ಹೆಸರು ಮಾಡಿದ್ದು, ಧಾರವಾಡದಲ್ಲಿ ವಿದ್ಯಾವರ್ಧಕ ಸಂಘ ಬಿಟ್ಟರೆ ನಗರದ ಕನ್ನಡ ಜಾಗೃತ ಪರಿಷತ್ತು ಸ್ವಂತ ಭವನ ಹೊಂದಿದೆ. ಇಂತಹ ಹಲವಾರು ಸಂಘಟನೆಗಳು ತಾಲೂಕಿನಲ್ಲಿದ್ದು, ಹೋರಾಟಗಾರರು, ಸಾಹಿತ್ಯಾಸಕ್ತರು ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮಗಳನ್ನು ನಡೆಸಲಾಗುವುದು. ತಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಇದೇ ವೇಳೆ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ   ಬಿ.ಎನ್.ಕೃಷ್ಣಪ್ಪ ಅವರನ್ನು ತಾಲೂಕಿನ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತ್ಯಾಸಕ್ತರು ಅಭಿನಂದಿಸಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ನಂಜೇಗೌಡ, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಡಿ.ವಿ.ಅಶ್ವತ್ಥಪ್ಪ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!