ಉಚಿತ ಚಾಲನಾ ಲೈಸೆನ್ಸ್ ನೀಡಲು ಚಿಂತನೆ: ಸಚಿವ ಬಿ.ಶ್ರೀರಾಮುಲು

ಬಾಗಲಕೋಟೆ: ಮುಂಬರುವ ದಿನಗಳಲ್ಲಿ ಚಾಲನಾ ಲೈಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಚಾಲನಾ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ತಾಲೂಕಿನ ಶಿಗಿಕೇರಿ ಬಾದಾಮಿ ರಸ್ತೆಯಲ್ಲಿ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡ ನೂತನ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದ ಭೂಮಿ ಪೂಜೆ ನೆರವೇರಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು ಬಾಗಲಕೋಟೆ ಭಾಗದಲ್ಲಿ ಕಬ್ಬಿನ ಟ್ರ್ಯಾಕ್ಟರ್ ಚಾಲಕರಿಗೆ ಲೈಸನ್ಸ್ ಇಲ್ಲದೇ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿರುವದನ್ನು ಗಮನಿಸಿದ್ದು, ಅಂತವರಿಗೆ ವರ್ಷದಲ್ಲಿ ಎರಡು ದಿನ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ರಾಜ್ಯದ 5 ಜಿಲ್ಲೆಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥದನ್ನು ಮಾಡಲಾಗುತ್ತಿದೆ. ಲೈನಸ್ಸ್ ಪಡೆಯಬೇಕಾದರೆ ಪರೀಕ್ಷೆಯಲ್ಲಿ ಶೇ.69 ರಷ್ಟು ಫಲಿತಾಂಶ ಬರಲೇಬೇಕು. ಇದರಿಂದ ಉತ್ತಮ ಚಾಲಕರಿಗೆ ಹೊರಹೊಮ್ಮುತ್ತಿರುವದರಿಂದ ಅಪಘಾತದ ಪ್ರಮಾಣವನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತದೆ. ಈ ಮೊದಲು ಮ್ಯಾನುವಲ್ ಆಗಿ ಚಾಲನಾ ಪ್ರಮಾಣ ಪತ್ರ ನೀಡಲಾಗುತ್ತಿತ್ತು. ಈ ನೂತನ ತಂತ್ರಜ್ಞಾನ ಅಳವಡಿಸುವ ಮೂಲಕ ಚಾಲನಾ ಪರವಾನಿಗೆ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ.

ಅಥಣಿಯಲ್ಲಿ 7.5 ಕೋಟಿ, ಚಿಕ್ಕೋಡಿಯಲ್ಲಿ 9 ಕೋಟಿ, ಜಮಖಂಡಿಯಲ್ಲಿ 7 ಕೋಟಿ ಹಾಗೂ ಬಾಗಲಕೋಟೆಯಲ್ಲಿ 9 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸಲಾಗುತ್ತಿದೆ. ಹಾವೇರಿಯಲ್ಲಿ ಈಗಾಗಲೇ ಈ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆ ರ ರಾಜ್ಯದ 30 ಜಿಲ್ಲೆಗಳಲ್ಲಿ ಆಗಬೇಕಿದೆ. ಇದರ ಜೊತೆಗೆ ಸಾರ್ವಜನಿಕರು ಪ್ರಾದೇಶಿಕ ಕಚೇರಿಗೆ ಅಲೆದಾಡದೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದರು ತಿಳಿಸಿದರು.

ಕೇಂದ್ರದ ಸಾರಿಗೆ ಮಂತ್ರಿಗಳಾದ ನಿತೀನ್ ಗಡಕರಿಯವರು ರಸ್ತೆಗಳನ್ನು ಅಭಿವೃದ್ದಿ ಪಡಿಸುತ್ತಿದ್ದಾರೆ. ಈ ಮೊದಲು ಒಂದು ದಿನಕ್ಕೆ 15 ಕಿಮೀ ರಸ್ತೆ ಮಾಡಲಾಗುತ್ತಿತ್ತು, ಈಗ 38-45 ಕಿಮೀ ವರೆಗೆ ಮಾಡಲಾಗುತ್ತಿದೆ. ರಸ್ತೆಗಳು ಉತ್ತಮವಾಗಿದ್ದರೆ ಮಾತ್ರ ಸುಗಮ ಕಾರ್ಯಕೈಗೊಳ್ಳಲು ಸಾದ್ಯವಾಗುತ್ತದೆ. ಸಾರಿಗೆ ಇಲಾಖೆಯಲ್ಲಿ ಬದಲಾವಣೆ ತರುವ ಮೂಲಕ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದ ಮಕ್ಕಳಿಗೆ ಉಚಿತ ಬಸ್‍ಪಾಸ್, ಗಾರ್ಮೆಂಟ್ ಕಾರ್ಮಿಕರಿಗೆ, ಹಿರಿಯ ನಾಗರಿಕರಿಗೆ ಉಚಿತ ಬಸ್‍ಪಾಸ್ ನೀಡಲು ಕ್ರಮವಹಿಸಲಾಗುವುದೆಂದು ತಿಳಿಸಿದರು. 

ಶಾಸಕರ ವೀರಣ್ಣ ಚರಂತಿಮಠ ಮಾತನಾಡಿ ಚಾಲನಾ ಪರೀಕ್ಷಾ ಪಥ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು 12 ಎಕರೆ ಜಮೀನು ಮಂಜೂರು ಮಾಡಿದ್ದಾರೆ. ಅದರಲ್ಲಿ 6 ಎಕರೆ ಜಾಗದಲ್ಲಿ 9 ಕೋಟಿ ವೆಚ್ಚದಲ್ಲಿ ಪರೀಕ್ಷಾ ಪಥ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ವಾ.ಕ.ರ.ಸಾ.ಸಂಸ್ಥೆಯ ಡಿಪೋ ಪಾರಂಭಿಸಲು ಅನುಮೋದನೆ ನೀಡಿದ್ದಾರೆ. ಅದಕ್ಕಾಗಿ 7 ಕೋಟಿ ರೂ. ಮಂಜೂರು ಮಾಡಿದ್ದು, ಶಿಕ್ರದಲ್ಲಿಯೇ ಚಾಲನೆ ದೊರೆಯಲಿದೆ ಎಂದರು. 

ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಬಾಗಲಕೋಟೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಶಿಗಿಕೇರಿ ಗ್ರಾ.ಪಂ ಅಧ್ಯಕ್ಷೆ ಮಲ್ಲವ್ವ ದ್ಯಾವನ್ನವರ, ನೀರಲಕೇರಿ ಗ್ರಾ.ಪಂ ಅಧ್ಯಕ್ಷ ಬಸವರಾಜ ಮಲ್ಲಾಪೂರ, ಬುಡಾದ ಬಿಟಿಡಿಎ ಸದಸ್ಯ ಶಿವಾನಂದ ಟವಳಿ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಂಟಿ ಸಾರಿಗೆ ಆಯುಕ್ತೆ ಎಂ.ಶೋಭಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಪಡಸಾಲಿ, ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಅಮ್ಮನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!