ಕಲಬುರಗಿಯಲ್ಲಿ ಜ.3ರಿಂದ ಪತ್ರಕರ್ತರ 36ನೇ ರಾಜ್ಯ ಮಟ್ಟದ ಸಮ್ಮೇಳನ: ದೊಡ್ಡಬಳ್ಳಾಪುರದಿಂದ ಸಮ್ಮೇಳನಕ್ಕೆ ಹೊರಟ ಪತ್ರಕರ್ತರು

ಕಲಬುರಗಿ: 2022ರ ಜನವರಿ 3 ಮತ್ತು 4ರಂದು ಕಲಬುರಗಿಯ ಬಸರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಪತ್ರಕರ್ತರ 36ನೇ ರಾಜ್ಯ ಮಟ್ಟದ ಸಮ್ಮೇಳನ ನಡೆಯಲಿದೆ. ಎರಡುವರೆ ದಶಕದ ನಂತರ ನಡೆಯುತ್ತಿರುವ ಈ ಸಮ್ಮೇಳನಕ್ಕೆ ಭರದ ಸಿದ್ಧತೆಗಳು ನಡೆದಿದೆ.

ಶನಿವಾರ ರಾತ್ರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಗಂಗರಾಜ ಶಿರವಾರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಸಮ್ಮೇಳನಕ್ಕೆ ತೆರಳಿದರು.

ಸಮ್ಮೇಳನದ ಅಂಗವಾಗಿ ಜ.3ರಂದು ಮಧ್ಯಾಹ್ನ 1.30ಕ್ಕೆ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ. ನಂತರ 5 ಗಂಟೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ ಸಾಧಕರ ಗೌರವಿಸುವ ಬ್ರ್ಯಾಂಡ್ ಕಲಬುರಗಿ ಕಾರ್ಯಕ್ರಮ ನಡೆಯಲಿದೆ. ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅತಿಥಿಗಳಾಗಿ ಪಾಲ್ಗೊಳ್ಳವರು. ಸಂಜೆ 7ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಎರಡನೇ ದಿನ ಜ.4ರಂದು ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸಲಿದ್ದು, ಮಹಾದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಚಿವ ಮುರುಗೇಶ ನಿರಾಣಿ ವಸ್ತುಪ್ರದರ್ಶನ ಉದ್ಘಾಟಿಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕ ಡಾ.ಅಜಯಸಿಂಗ್‌, ಸಂಸದ ಡಾ.ಉಮೇಶ ಜಾಧವ ವ್ಯಂಗ್ಯ ಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ.

ಅದೇ ದಿನ ಮಧ್ಯಾಹ್ನ 12.30ಕ್ಕೆ ಡಿಜಿಟಲ್‌ ಮಾಧ್ಯಮ ಸ್ಥಿತ್ಯಂತರ ಕುರಿತು ಗೋಷ್ಠಿ- 1, ಮಧ್ಯಾಹ್ನ 2ಕ್ಕೆ ಮಾಧ್ಯಮ ಮತ್ತು ಸರ್ಕಾರ ಸವಾಲುಗಳು-2ನೇ ಗೋಷ್ಠಿ, ಸಂಜೆ 4 ಗಂಟೆಗೆ ಮಹಿಳೆ ಮತ್ತು ಸವಾಲುಗಳು-3ನೇ ಗೋಷ್ಠಿ ನಡೆಯಲಿದೆ. ಸಮ್ಮೇಳನದಲ್ಲಿ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ನಡೆಯಲಿದೆ.

ಸಂಜೆ 5 ಗಂಟೆಗೆ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ದಿಕ್ಸೂಚಿ ಭಾಷಣ ಮಾಡುವರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಕಾರ್ಜುನ ಖರ್ಗೆ ಅಭಿನಂದನಾ ನುಡಿಗಳನ್ನಾಡುವರು. ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಮುರುಗೇಶ ನಿರಾಣಿ, ಶಿವರಾಮ ಹೆಬ್ಬಾರ,  ಸಿ.ಎನ್.ಅಶ್ವಥನಾರಾಯಣ, ಗೋವಿಂದಯ್ಯ ಮೊದಲಾದವರು ಪಾಲ್ಗೊಳ್ಳುವರು. ಪತ್ರತಕರ್ತರಾದ ರವಿ ಹೆಗಡೆ ಸಮಾರೋಪ ಭಾಷಣ ಮಾಡಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!