ಬೆಂ.ಗ್ರಾ.ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ: ಶೇ. ನೂರರಷ್ಟು ಪ್ರಗತಿ ಸಾಧಿಸಲು ಸಚಿವ ಎನ್.ನಾಗರಾಜು ಸೂಚನೆ(ಎಂ.ಟಿ.ಬಿ)

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ. 96 ರಷ್ಟು ಮೊದಲ ಡೋಸ್ ಹಾಗೂ ಶೇ. 86 ರಷ್ಟು ಎರಡನೇ ಡೋಸ್ ಕೋವಿಡ್ ಲಸಿಕಾ ಪ್ರಗತಿ ಸಾಧಿಸಲಾಗಿದ್ದು, ಜಿಲ್ಲಾಡಳಿತ, ವೈದ್ಯಾಧಿಕಾರಿಗಳ ತಂಡ ಹಾಗೂ ಆಶಾ ಕಾರ್ಯಕರ್ತೆಯರು ಸಹಕಾರದಿಂದ ಕಾರ್ಯ ನಿರ್ವಹಿಸುವ ಮೂಲಕ ಲಸಿಕೆ ಪಡೆಯದವರಿಗೆ ಲಸಿಕೆ ನೀಡಿ, ಶೇಕಡಾ ನೂರರಷ್ಟು ಲಸಿಕಾ ಪ್ರಗತಿ ಸಾಧಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿಂದು ನಡೆದ “15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ”ಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 48,865 ಮಕ್ಕಳಿಗೆ ಲಸಿಕೆ ನೀಡಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ದೇವನಹಳ್ಳಿ ತಾಲ್ಲೂಕಿನಲ್ಲಿ 10414, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 15022, ಹೊಸಕೋಟೆ ತಾಲ್ಲೂಕಿನಲ್ಲಿ 13148 ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 10281 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ ಎಂದರು.

15 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಮಕ್ಕಳನ್ನು ಕೋವಿಡ್ ಸೋಂಕಿನಿಂದ ಸುರಕ್ಷಿತರನ್ನಾಗಿಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉದ್ದೇಶವಾಗಿದೆ.

ಮಹಾರಾಷ್ಟ್ರ, ದೆಹಲಿಯಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡಿದ್ದು, ದಿನೇ ದಿನೇ ರಾಜ್ಯದಲ್ಲಿಯೂ ಸಾವಿರಾರು ಕೋವಿಡ್ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಜಾಗ್ರತೆ ವಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಯುವಕರು, ವಯಸ್ಕರು ಸೇರಿದಂತೆ ರಾಜ್ಯದಲ್ಲಿ 48 ಸಾವಿರ ಜನರು ಸಾವನ್ನಪ್ಪಿದ್ದು, ಅಪಾರ ಸಾವು ನೋವು ಸಂಭವಿಸಿರುವುದರಿಂದ, ಮುನ್ನೆಚ್ಚರಿಕೆಯಾಗಿ ಯುವಜನತೆಗೆ ಲಸಿಕೆಯನ್ನು  ನೀಡಲಾಗುತ್ತಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಸಭೆಗಳನ್ನು ನಡೆಸಿ, ಕೇಂದ್ರ ಸರ್ಕಾರದ ನಿಯಮಾವಳಿ ಹಾಗೂ ಸೂಚನೆಗಳಂತೆ ರಾಜ್ಯದಲ್ಲಿ 37 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮೂರನೇ ಅಲೆ ಎದುರಿಸಲು ಅಗತ್ಯ ವೈದ್ಯಕೀಯ ತಯಾರಿಯೊಂದಿಗೆ, ಮುಂಜಾಗ್ರತೆಯಿಂದ ಜಿಲ್ಲಾಡಳಿತದೊಂದಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೈಜೋಡಿಸಿ, ಮಹಾಮಾರಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರಲು ಶ್ರಮಿಸಬೇಕು ಎಂದು ತಿಳಿಸಿದರು.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ಆರೋಗ್ಯ ಕ್ಷೇತ್ರದಲ್ಲಿ ಬಹುಮುಖ್ಯ ಯೋಜನೆಯಾಗಿದ್ದು, ರೋಗಿಗಳು ತಮ್ಮ ಪಡಿತರ ಚೀಟಿ ಮತ್ತು ಆಧಾರ್‌ ಕಾರ್ಡ್‌ನೊಂದಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಹೋದರೆ, ಅದೇ ಸರ್ಕಾರಿ ಆಸ್ಪತ್ರೆಯು ಚಿಕಿತ್ಸೆ ನೀಡುವ ಸಾಮರ್ಥ್ಯ ಹೊಂದಿದ್ದಲ್ಲಿ ಅಲ್ಲಿಯೇ ರೋಗಿಗೆ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತೆಯು ಚಿಕಿತ್ಸೆ ನೀಡುವ ಸಾಮರ್ಥ್ಯವನ್ನು ಹೊಂದಿಲ್ಲದಿದ್ದರೆ, ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಲಸಿಕೆ ಹಾಗೂ ಮುಂಜಾಗ್ರತಾ ಕ್ರಮಗಳು ಮಾತ್ರ ಜನರನ್ನು ಕೋವಿಡ್ ಮಹಾಮಾರಿಯಿಂದ ಸಂರಕ್ಷಿಸಲು ಸಾಧ್ಯ. ಕಳೆದ ಎರಡು ವರ್ಷ, ದೇಶ ಹಾಗೂ ರಾಜ್ಯದ ಪ್ರಗತಿಯ ವೇಗವನ್ನು ತಡೆದಿರುವ ಕೋವಿಡ್ ಸೋಂಕು, ಮಾನವ ಕುಲಕ್ಕೆ ದೊಡ್ಡ ಸಮಸ್ಯೆಯಾಗಿ ಮಾರ್ಪಾಡಾಗಿದೆ ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ದೇವನಹಳ್ಳಿ ಪುರಸಭೆ ಸದಸ್ಯರಾದ ಮುನಿಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!