ಬೆಂಗಳೂರು: ತೀವ್ರಗೊಳ್ಳುತ್ತಿರುವ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಎರಡು ವಾರ ಶಾಲೆಗಳನ್ನ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಕರೊನಾ ತೀವ್ರವಾಗಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಹಾಗೂ ಇತರ ಜಿಲ್ಲೆಯಲ್ಲಿ ವಿಭಿನ್ನ ನಿಯಮ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ನಗರದಲ್ಲಿ ಇಂದು ಒಂದೇ ದಿನ ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಕರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಎರಡು ವಾರ ಶಾಲೆಗಳನ್ನು ಬಂದ್ ಮಾಡಲು ತೀರ್ಮಾನಿಸಲಾಗಿದೆ. ಉಳಿದಂತೆ ರಾಜ್ಯಾದ್ಯಂತ ಎರಡು ವಾರ ವೀಕೆಂಡ್ ಕರ್ಫೂ ಜಾರಿ ಮಾಡಲಾಗಿದ್ದು, ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಬೆಂಗಳೂರಿನಲ್ಲಿ 10 ಮತ್ತು 12 ತರಗತಿ ಹೊರತು ಪಡಿಸಿ ಎಲ್ಲಾ ತರಗತಿಗಳು ಆಫ್ ಲೈನ್ ಕ್ಲಾಸ್ಗೆ ಮಾತ್ರ ಅವಕಾಶ ನೀಡಲಾಗಿದೆ. ನಾಳೆ 10 ಗಂಟೆಯಿಂದ ನಿಯಮಗಳು ಜಾರಿ ಆಗಲಿದೆ. ಮುಂದಿನ ಎರಡು ವಾರಗಳ ಕಾಲ ರಾಜ್ಯಾದ್ಯಂತ ರ್ಯಾಲಿ, ಪ್ರತಿಭಟನೆ, ಜಾತ್ರೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.
ಕೋವಿಡ್ ಪ್ರಕರಣಗಳ ಕಡಿವಾಣಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರಕಾರ ಆದೇಶ ನೀಡಿದ್ದು ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ ಜನವರಿ 17 ರವರೆಗೆ ಜಾರಿಯಲ್ಲಿರಲಿದೆ.
ಸರ್ಕಾರಿ ಕಚೇರಿ, ಮಾಲ್ ಗಳಲ್ಲಿ ಭಾರತ ಸರ್ಕಾರದ ಮಾರ್ಗಸೂಚಿ ಪಾಲಿಸಲು ನಿರ್ಧರಿಸಲಾಗಿದೆ. ದೇವಸ್ಥಾನ, ಮಾಲ್, ಚಿತ್ರಮಂದಿರ, ಪಬ್, ಬಾರ್ ಎಲ್ಲಾ ಸಾರ್ವಜನಿಕ ಸ್ಥಳಗಲ್ಲಿ ಶೇ.50ರ ಮಿತಿ ಜಾರಿಗೊಳಿಸಲಾಗಿದೆ. ಮದುವೆ ಹೊರಾಂಗಣಕ್ಕೆ 200 ಜನ, ಒಳಾಂಗಣದಲ್ಲಿ 100 ಜನರಿಗೆ ಮಿತಿ, ಹೇರಲಾಗಿದೆ. ಕೋವಿಡ್ ಎರಡು ಡೋಸ್ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಾತ್ರೆ, ಪ್ರತಿಭಟನೆ, ಪಾದಯಾತ್ರೆ ನಡೆಸಲು ಅವಕಾಶವಿಲ್ಲ . ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಅರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಕೋವಿಡ್ ತೀವ್ರವಾಗಿದ್ದರು ಜನತೆ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಏಕಾಏಕಿ ಸೋಂಕು ದೃಢಪಟ್ಟರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅನಾನುಕೂಲ ಆಗಬಾರದೆಂಬ ಕಾರಣಕ್ಕೆ ನಿಯಮ ಹೇರಲಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಕರೊನಾ ಸೋಂಕಿನ ಪ್ರಕರಣ ಹೆಚ್ಚಳದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಐದು ವಲಯಗಳಾಗಿ ವಿಂಗಡಿಸಿ, ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಬೆಡ್, ಆಕ್ಸಿಜನ್ ಸೇರಿದಂತೆ ಕರೊನಾ ನಿಯಂತ್ರಣಕ್ಕೆ ಜವಾಬ್ದಾರಿ ವಹಿಸಲು ಸೂಚಿಸಲಾಗಿದೆ. ಕ್ಷೇತ್ರವಾರು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….