ದೊಡ್ಡಬಳ್ಳಾಪುರ: ಮಕ್ಕಳೊಂದಿಗೆ ಪೆಟ್ರೋಲ್ ಸುರಿದುಕೊಂಡ ಮಹಿಳೆಯೊಬ್ಬರು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಅರಳುಮಲ್ಲಿಗೆ ವ್ಯಾಪ್ತಿಯ ಎಸ್.ಎಂ.ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಸಂಧ್ಯಾ (33ವರ್ಷ), ಕುಸುಮ (3.5 ವರ್ಷ) ಹಾಗೂ ರೋಹಿತ್ (1.5ವರ್ಷ) ಎಂಬುವವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
ವಿಷಯ ತಿಳಿದ ಕೂಡಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸತೀಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.(ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….