ಕೋವಿಡ್ ಹೆಚ್ಚಳ: ಜ.8ರಿಂದ 16ರ ವರೆಗೆ ಶಾಲೆ ಕಾಲೇಜು ಗಳಿಗೆ ರಜೆ ಘೋಷಣೆ

ತೆಲಂಗಾಣ: ದೇಶದಲ್ಲಿ ದಿನೇ ದಿನೆ ಕೋವಿಡ್‌ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿವೆ. ದಿನನಿತ್ಯ ಕೋವಿಡ್‌ ಪ್ರಕರಣಗಳು  ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಪಕ್ಕದ ರಾಜ್ಯ ತೆಲಂಗಾಣ ಸೋಂಕು ಹೆಚ್ಚಾಗಿರುವ ಕಾರಣ ಮಕ್ಕಳ ಆರೋಗ್ಯ ದೃಷ್ಠಿಯಿಂದ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಕೋವಿಡ್‌ ಪ್ರಕರಣಗಳು ಏರುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 8 ರಿಂದ 16 ರವರೆಗೆ ರಜೆ ಘೋಷಿಸಲಾಗಿದೆ. ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸೋಮವಾರ ಈ ಘೋಷಣೆ ಮಾಡಿದ್ದಾರೆ.

ತೆಲಂಗಾಣದಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸೋಮವಾರ ಸಭೆ ನಡೆಸಿದರು. ಕೋವಿಡ್‌ ಎದುರಿಸಲು ಬೆಡ್‌, ಆಕ್ಸಿಜನ್‌ ಬೆಡ್‌, ಔಷಧಿಗಳು ಮತ್ತು ಪರೀಕ್ಷಾ ಕಿಟ್‌ಗಳನ್ನು ಖರೀದಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸಾಮಾನ್ಯ ಜನರಿಗೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ರಾಜ್ಯದಾದ್ಯಂತ ಹೆಚ್ಚಿನ ವಸತಿ ಪ್ರದೇಶಗಳಲ್ಲಿ ಕ್ಲಿನಿಕ್‌ಗಳನ್ನು ಸ್ಥಾಪಿಸಲು ಸಿಎಂ ನಿರ್ಧರಿಸಿದ್ದಾರೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ಹೇಳಲಾಗಿದೆ. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಸದ್ಯಕ್ಕೆ ಲಾಕ್‌ಡೌನ್ ಅಗತ್ಯವಿಲ್ಲ ಎಂದು ಸಭೆಯಲ್ಲಿ ಆರೋಗ್ಯ ಅಧಿಕಾರಿಗಳು ಸಿಎಂ ಕೆ.ಚಂದ್ರಶೇಖರ್ ರಾವ್ ಅವರಿಗೆ ತಿಳಿಸಿದರು.

ಓಮಿಕ್ರಾನ್ ಭೀತಿಯಿರುವುದರಿಂದ ಈ ಸಂದರ್ಭದಲ್ಲಿ ಗುಂಪು ಸೇರುವುದು, ಬಹಿರಂಗ ಸಭೆ ಸೇರಬಾರದು, ಮೆರವಣಿಗೆಗಳಿಗೆ ಅವಕಾಶ ನೀಡಬಾರದೆಂದು ವೈದ್ಯಾಧಿಕಾರಿಗಳು ಸಿಎಂಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

ಸೋಮವಾರ ಬೆಳಿಗ್ಗೆ ಭಾರತದಲ್ಲಿ 24 ಗಂಟೆಗಳಲ್ಲಿ 33,750 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿದ್ದವು. ಕೋವಿಡ್ ಪ್ರಕರಣಗಳು ಕಳೆದ ವಾರದಲ್ಲಿ 181 ಪ್ರತಿಶತ ಏರಿಕೆ ಕಂಡಿವೆ. ಡಿಸೆಂಬರ್ 27-ಜನವರಿ 2 ರಿಂದ, ಭಾರತವು ಸುಮಾರು 1.3 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ ಎಂದು ಕೋಸ್ಟಲ್ ಮಿರರ್ ವರದಿ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!