ಬೆಂಗಳೂರು: ಕರೊನಾದ ಮೂರನೇ ಅಲೆ ದೀರ್ಘ ಕಾಲ ಇರೋದಿಲ್ಲ. ವೇಗವಾಗಿ ಹರಡುತ್ತೆ, ಬೇಗ ಮುಕ್ತಾಯ ಆಗುತ್ತೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ವಿದೇಶದಲ್ಲಿ ನಡೆದ ಅಧ್ಯಯದಂತೆ ಕರೊನಾ ಬಂದ್ರು ಯಾರು ಆತಂಕ ಪಡುವುದು ಬೇಡ, ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗೋದು ಕಡಿಮೆ. ಗಂಟಲಲ್ಲಿ ಮಾತ್ರ ಇದು ಇರುತ್ತೆ. ಹೀಗಾಗಿ ಯಾರು ಆತಂಕ ಪಡಬೇಡಿ.
ಓಮಿಕ್ರಾನ್ ಎರಡು ಡೋಸ್ ಲಸಿಕೆ ಪಡೆದವರ ಮೇಲೆ ಪ್ರಭಾವ ಕಡಿಮೆ ಇರುತ್ತೆ. ಹೀಗಾಗಿ ಜನ ಎರಡು ಡೋಸ್ ಲಸಿಕೆ ಪಡೆಯಬೇಕು.
15-18 ವಯಸ್ಕರಿಗೆ ಮಂಗಳವಾರ 3 ಲಕ್ಷ 50 ಸಾವಿರ ಲಸಿಕೆ ಕೊಟ್ಟಿದ್ದೇವೆ. ದೇಶದಲ್ಲಿ ಲಸಿಕೆ ನಿಡೋದ್ರಲ್ಲಿ 3ನೇ ಸ್ಥಾನದಲ್ಲಿ ಇದ್ದೇವೆ. ಈಗಾಗಲೇ ಶೇ.25 ಲಸಿಕೆ ಮಕ್ಕಳಿಗೆ ಕೊಡಲಾಗಿದೆ. 28 ದಿನಗಳು ಆದ ಮೇಲೆ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಕೊಡುತ್ತೇವೆ.
ಕೋವ್ಯಾಕ್ಸಿನ್ ಮಾತ್ರ ಎರಡನೇ ಡೋಸ್ ಲಸಿಕೆ ಕೊಡಲಾಗುತ್ತೆ. ಲಸಿಕೆ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತೆ. 10-15 ದಿನಗಳಲ್ಲಿ ಎಲ್ಲಾ ಮಕ್ಕಳಿಗೂ ಮೊದಲ ಡೋಸ್ ಲಸಿಕೆ ಕೊಡುವ ಕೆಲಸ ಮಾಡುತ್ತೇವೆ ಎಂದರು.
ಜನರು, ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳ ಸಹಕಾರ ಮುಖ್ಯ. ಆರೋಗ್ಯದ ತುರ್ತು ಪರಿಸ್ಥಿತಿ ಇರುವುದರಿಂದ ಜನರು, ರಾಜಕೀಯ ಪಕ್ಷಗಳು ಸಹಕಾರ ಕೊಡಬೇಕು. ಜನಸಾಮಾನ್ಯರು 4 ರಿಂದ 6 ವಾರಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು. ಈ ಅಲೆ ಬೇಗ ಹರಡಿದ್ದರೂ ಅಷ್ಟೇ ವೇಗವಾಗಿ ಕಡಿಮೆ ಆಗುತ್ತದೆ. ಈಗಾಗಲೇ ಬೇರೆ ದೇಶಗಳನ್ನು ಗಮನಿಸಿದರೆ ಹೀಗೆ ಇದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….