ದೊಡ್ಡಬಳ್ಳಾಪುರ: ಮಕ್ಕಳೊಂದಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆಗೆ ದಾಖಲಾಗಿದ್ದ ಗೃಹಿಣಿ ಮತ್ತು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಲೂಕಿನ ಎಸ್.ಎಂ.ಗೊಲ್ಲಹಳ್ಳಿಯಲ್ಲಿ ಮಂಗಳವಾರ ಸಂಧ್ಯಾ (33ವರ್ಷ) ಎನ್ನುವವರು ಮಕ್ಕಳಾದ ಕುಸುಮ (3.5 ವರ್ಷ) ಹಾಗೂ ರೋಹಿತ್ (1.5ವರ್ಷ) ಎಂಬುವವರೊಂದಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ತೀವ್ರ ಸುಟ್ಟ ಗಾಯಗಳಾಗಿದ್ದ ಮೂವರನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….