ಜಾನುವಾರುಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಸಚಿವ ಪ್ರಭು.ಬಿ.ಚವ್ಹಾಣ್

ಬೆಂ.ಗ್ರಾ.ಜಿಲ್ಲೆ: ಹಸುಗಳು ಸೇರಿದಂತೆ ಮೂಕ ಪ್ರಾಣಿಗಳ ಸೇವೆಗಾಗಿ ಸರ್ಕಾರವು ಹಲವಾರು ಯೋಜನೆಗಳ ಮೂಲಕ ಜಾನುವಾರುಗಳ ಸಂರಕ್ಷಣೆಗೆ ಕ್ರಮ ಕೈಗೊಂಡಿದ್ದು, ಜಾನುವಾರುಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಪಶು ಸಂಗೋಪನಾ ಸಚಿವರಾದ ಪ್ರಭು.ಬಿ.ಚವ್ಹಾಣ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಪಶುಪಾಲನಾ ಇಲಾಖೆಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಾಣಿ ಸಹಾಯವಾಣಿ ಕೇಂದ್ರವು ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭವಾಗಿದ್ದು, 24/7 ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಹಾಯವಾಣಿಗೆ ಕರೆ ಮಾಡುವ ಮೂಲಕ ಜಾನುವಾರುಗಳಿಗೆ ಸಂಬಂಧಿಸಿದ ಸಹಾಯವನ್ನು ಪಡೆಯಬಹುದಾಗಿದೆ ಎಂದರು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಅಧಿನಿಯಮ 2020ರ ಕಾಯ್ದೆಯಡಿ ಜಾನುವಾರುಗಳ ಸಂರಕ್ಷಣೆ ಸಾಧ್ಯವಾಗುವುದರಿಂದ ಈ ಕಾಯ್ದೆಯ ಕುರಿತು ಅಧಿಕಾರಿಗಳು ಪೂರ್ಣ ಮಾಹಿತಿಯನ್ನು ತಿಳಿದುಕೊಂಡು, ಗ್ರಾಮಗಳ ಸಭೆಯಲ್ಲಿ ಭಾಗವಹಿಸಿ, ರೈತರಿಗೆ, ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ತಿಳಿಸಿದರು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಅಧಿನಿಯಮ 2020ರ ಕಾಯ್ದೆಯು ಜಾಮೀನು ರಹಿತ ಕಾಯ್ದೆಯಾಗಿದ್ದು, ಅಪರಾಧ ಸಾಬೀತಾದಲ್ಲಿ, ಮೂರು ವರ್ಷದಿಂದ ಏಳು ವರ್ಷಗಳವರೆಗೆ ಕಾರಾವಾಸ ಅಥವಾ ಒಂದು ಜಾನುವಾರಿಗೆ ರೂ. 50 ಸಾವಿರದಿಂದ 5 ಲಕ್ಷಗಳವರೆಗೆ ಜುಲ್ಮಾನೆಗೆ ಅವಕಾಶವಿದ್ದು, ಎರಡನೇ ಅಥವಾ ಮುಂದುವರೆದ ಸಂದರ್ಭದಲ್ಲಿ ರೂ 1 ಲಕ್ಷದಿಂದ 10 ಲಕ್ಷಗಳವರೆಗೆ ಜುಲ್ಮಾನೆ ಅಥವಾ ಏಳು ವರ್ಷ ಕಾರಾವಾಸ ಅಥವಾ ಅವೆರಡರಿಂದಲೂ ದಂಡಿತನಾಗಲು ಅವಕಾಶವಿದೆ ಎಂದು ಹೇಳಿದರು.

ಕರ್ನಾಟಕದ ಇತಿಹಾಸದಲ್ಲೇ ಗೋಶಾಲೆ ಆರಂಭಿಸಲು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರವಾಗಿ ಭೂಮಿ ಪೂಜೆ ಮಾಡಲು ತಿಳಿಸಿದರಲ್ಲದೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಉಪ ನಿರ್ದೇಶಕರು ತಹಶೀಲ್ದಾರ್ ಮೂಲಕ ಗೋಮಾಳದ ಜಾಗ ಗುರುತಿಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಿದರೆ, ಮಂಜೂರಾತಿ ನೀಡಲಾಗುವುದು ಎಂದು ಹೇಳಿದರು.

ಪ್ರಾಣಿ ಕಲ್ಯಾಣ ಮಂಡಳಿಯ ಕಾರ್ಯ ವೈಖರಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಪ್ರಾಣಿ ಸಹಾಯವಾಣಿ ಕೇಂದ್ರವು ಸದಾ ಚಾಲ್ತಿಯಲ್ಲಿರಬೇಕು ಮತ್ತು ದೂರುಗಳ ವಿವರ ಹಾಗೂ ಒದಗಿಸಲಾದ ಸಹಾಯದ ವಿವರಗಳನ್ನು ಲಿಖಿತವಾಗಿ ಕಚೇರಿಗೆ ಸಲ್ಲಿಸುವಂತೆ ತಿಳಿಸಿದರು.

ರಾಜ್ಯಕ್ಕೆ 291 ಪಶು ಸಂಜೀವಿನಿ ಆ್ಯಂಬುಲೆನ್ಸ್‌ಗಳನ್ನು ನೀಡಲು ನಿರ್ಧರಿಸಲಾಗಿದ್ದು, ಈಗಾಗಲೇ 15 ಜಿಲ್ಲೆಗಳಿಗೆ ನೀಡಲಾಗಿದೆ ಎಂದರಲ್ಲದೆ, 1962 ಸಂಖ್ಯೆಗೆ ಕರೆ ಮಾಡುವ ಮೂಲಕ ಪಶು ಸಂಜೀವಿನಿ ಆ್ಯಂಬುಲೆನ್ಸ್ ಸೌಲಭ್ಯ ಪಡೆಯಬಹುದಾಗಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1ಲಕ್ಷ 82 ಸಾವಿರ ಜಾನುವಾರುಗಳಿದ್ದು, ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಅಗತ್ಯವಿರುವ ಮೇವು, ಲಸಿಕೆ, ಆರೋಗ್ಯ ಶಿಬಿರ, ರೈತರಿಗೆ ತರಬೇತಿಗಳ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರಲ್ಲದೆ, ಪಶು ಇಲಾಖೆಗೆ ಸಂಬಂಧಿಸಿದ ಕಟ್ಟಡಗಳ ಶಿಥಿಲೀಕರಣ, ದುರಸ್ತಿ, ನವೀಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡಲು ಹೇಳಿದರು.

ಪಶುವೈದ್ಯಾಧಿಕಾರಿಗಳು ಸೇರಿದಂತೆ ಇಲಾಖೆಗೆ ಅಗತ್ಯವಿರುವ 400 ಸಿಬ್ಬಂದಿಗಳನ್ನು ಶೀಘ್ರದಲ್ಲೇ ನೇಮಕಾತಿ ಮಾಡಲಿದ್ದೇವೆ ಎಂದರಲ್ಲದೆ, ಪಶು ಪಾಲನಾ ಆಸ್ಪತ್ರೆಗಳಲ್ಲಿ ಔಷಧಿ ಲಭ್ಯತೆಯ ಮಾಹಿತಿ ಪಡೆದರು ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವಂತೆ ತಿಳಿಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನು ನೀಡಿ, ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವಾಗಿ ನೇಮಕಾತಿ ನಡೆಸಲು ಮನವಿ ಮಾಡಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ ಹೈನುಗಾರಿಕೆ ಪ್ರಮುಖವಾಗಿದ್ದು, ದೇವನಹಳ್ಳಿ ಕ್ಷೇತ್ರವನ್ನು  ಮೀಸಲಾತಿ ಕ್ಷೇತ್ರಕ್ಕೆ ಪರಿಗಣಿಸಿ, ವಿಶೇಷ ಅವಕಾಶ ನೀಡಬೇಕೆಂದು ಕೋರಿದರಲ್ಲದೆ, ತಾಲ್ಲೂಕಿಗೆ 3 ರಿಂದ 4 ಪಶು ಪಾಲನಾ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ (ಕೋವಿಡ್-19) ಸಚಿವ ಎನ್.ನಾಗರಾಜು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಉಪ‌ ವಿಭಾಗಾಧಿಕಾರಿ ಅರುಳ್‌ಕುಮಾರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಜಿ.ಎಂ.ನಾಗರಾಜ್, ಸಹಾಯಕ ನಿರ್ದೇಶಕರು, ಪಶುವೈದ್ಯಾಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ

ಜೆಡಿಎಸ್ ಪಕ್ಷವನ್ನು ರಾಜ್ಯಾದ್ಯಂತ ಸಂಘಟಿಸುತ್ತಿರುವ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಹೋದಲೆಲ್ಲಾ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.

[ccc_my_favorite_select_button post_id="110752"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!