ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮ ದೆಡೆಗೆ ಸಾಗುವ ಸೂಚನೆ ಇದೆ.
ವೃಷಭ: ಹೊಟ್ಟೆ ಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರ ಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.
ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವುದು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.
ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.
ಸಿಂಹ: ಪೂರ್ವ ತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.
ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.
ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.
ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ.
ಧನಸ್ಸು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ವಿದೇಶ ಪ್ರಯಾಣದ ಯೋಗವಿದೆ.
ಮಕರ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿ ಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.
ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮ ವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ ದಾನ ಮಾಡಿರಿ.
ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು.ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
ತಿಥಿ: ಚತುರ್ಥಿ
ನಕ್ಷತ್ರ: ಧನಿಷ್ಠ ನಕ್ಷತ್ರ
ರಾಹುಕಾಲ: 01:54 ರಿಂದ 03:20
ಗುಳಿಕಕಾಲ: 09:37 ರಿಂದ 11:03
ಯಮಗಂಡಕಾಲ: 06:46 ರಿಂದ 08:11
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….