ನವದೆಹಲಿ: ಬುಧವಾರ ಪಂಜಾಬ್ನಲ್ಲಿ ಸಂಭವಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಯಾಣದ ವೇಳೆ ಉಂಟಾದ ಭದ್ರತಾ ಲೋಪದ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಪ್ರಧಾನಿ ಮೋದಿಗೆ ಅವರಿಗೆ ಕರೆ ಮಾಡಿ ರಾಷ್ಟ್ರಪತಿ ಭವನಕ್ಕೆ ಕರೆಸಿಕೊಂಡಿದ್ದ ಕೋವಿಂದ್ ಅವರು, ನೇರವಾಗಿ ಪ್ರಧಾನಿಗಳಿಂದಲೇ ಭದ್ರತಾ ಲೋಪದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರೋ ರಾಷ್ಟ್ರಪತಿ ಕಛೇರಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಬುಧವಾರ ಪಂಜಾಬ್ನಲ್ಲಿ ಉಂಟಾದ ಭದ್ರತಾ ಲೋಪ ಕುರಿತು, ನೇರವಾಗಿ ಅವರಿಂದಲೇ ಮಾಹಿತಿ ಪಡೆದುಕೊಂಡರು. ಜೊತೆಗೆ, ಗಂಭೀರ ಲೋಪದ ಬಗ್ಗೆ ಕೂಡ ರಾಷ್ಟ್ರಪತಿಗಳು ಕಾಳಜಿ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆಂದು ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….