3ನೇ ಅಲೆ ಜಿಲ್ಲೆಗೆ ಬರಕೂಡದು ಎಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ: ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರ ಪಟ್ಟಿಯ ವಿವರವನ್ನು (Line List) ಪಡೆದು ಅಂತಹವರನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು 2-3 ದಿನಗಳಲ್ಲಿ ಲಸಿಕಾಕರಣ ವ್ಯಾಪ್ತಿಗೆ ಒಳಪಡಿಸಿ 2ನೇ ಡೋಸ್ ಲಸಿಕೆ ಹಾಕಿಸುವಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಟ್ಟೆಚ್ಚರ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೋವಿಡ್-19ರ ಸೋಂಕು ನಿಯಂತ್ರಣ ಹಾಗೂ ಲಸಿಕಾಕರಣ ಕುರಿತು ಆನ್ ಲೈನ್ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಉಲ್ಬಣಗೊಂಡು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ಗ್ರಾಮ ಮತ್ತು ವಾರ್ಡ್ ಮಟ್ಟದ ಕೋವಿಡ್ ನಿಯಂತ್ರಣ ಟಾಸ್ಕ್ ಪೋರ್ಸ್ ಸಮಿತಿಗಳು ತಮ್ಮ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಿ ಜನವರಿ 4 ಮತ್ತು 6 ರಂದು ಸರ್ಕಾರದ ಹೊರಡಿಸಿರುವ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಸರ್ಕಾರದ ದಿನ ನಿತ್ಯದ ನಿಯಮಗಳನ್ನು ಪಾಲಿಸಿ: ಚಿಕ್ಕಬಳ್ಳಾಪುರ ಜಿಲ್ಲೆಯು ಬೆಂಗಳೂರಿಗೆ ಅತೀ ಸಮೀಪದ ಜಿಲ್ಲೆಯಾಗಿದ್ದು, ಉದ್ಯೋಗ ಮತ್ತು ಇನ್ನಿತರ ಕಾರ್ಯಗಳಿಗೆ ದಿನನಿತ್ಯ ಹೋಗಿಬರುವವರಿಂದ ಸೋಂಕು ಜಿಲ್ಲೆಯಲ್ಲಿ ಹರಡದಂತೆ ಹೆಚ್ಚಿನ ನಿಗಾವಹಿಸುವುದು ಅತ್ಯಗತ್ಯವಾಗಿದ್ದು, ಅಂತಹವರನ್ನು ಆಗಿಂದಾಗ್ಗೆ ಕೋವಿಡ್ ಪರೀಕ್ಷೆಗೆ ನಿಯಮಿತವಾಗಿ ಒಳಪಡಿಸಲು ಕಾರ್ಯಪಡೆಗಳು ಕಾರ್ಯ ಪ್ರವೃತ್ತರಾಗಬೇಕಿದೆ, ನಿಗದಿತ ಗುರಿಯಂತೆ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಶೇ.100 ರಷ್ಟು ಮಾಡಬೇಕು. ಈ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ/ನಗರ ಸ್ಥಳೀಯಾಡಳಿತ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಇಂದೆ ಸಭೆ ಮಾಡಿ ನಿರ್ದೇಶಿಸುವ ಮೂಲಕ ಸರ್ಕಾರದ ಜನವರಿ 4 ಮತ್ತು 6 ರ ಆದೇಶದಂತೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕರಾರುವಕ್ಕಾಗಿ ಜಾರಿಗೊಳಿಸುವಂತೆ ಸೂಚಿಸಿದರು.

ಪೂರ್ವ ಪರಿಶೀಲಿಸಿ: ಕೋವಿಡ್ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಆರೈಕೆಗಾಗಿ ಹಾಸಿಗೆಗಳ ಲಭ್ಯತೆ, ಆಕ್ಸಿಜನ್ ಪೂರೈಕೆ ಬಗ್ಗೆ, ಆಕ್ಸಿಜನ್ ಸಿಲಿಂಡರ್ ಗಳ ಲಭ್ಯತೆ ಹಾಗೂ ಆಮ್ಲಜನಕ ಉತ್ಪಾದಕ ಘಟಕ ಕಾರ್ಯನಿರ್ವಹಣೆ, ವೆಂಟಿ ಲೇಟರ್ ಗಳ ಲಭ್ಯತೆ ಹಾಗೂ ಔಷಧಿಗಳ ಲಭ್ಯತೆ ವಿವರ ಸೇರಿದಂತೆ, ಕೋವಿಡ್ ರೋಗಿಗಳ ವೈದ್ಯಕೀಯ ಚಿಕಿತ್ಸೆಗಾಗಿ ಬೇಕಾಗಿರುವ ಎಲ್ಲಾ ಸಿದ್ಧತೆಗಳ ಬಗ್ಗೆ ತಾಲ್ಲೂಕು ಕೋವಿಡ್ ನೋಡಲ್ ಅಧಿಕಾರಿಗಳು ಪರಿಶೀಲಿಸಿ ವರದಿ ಸಲ್ಲಿಸಬೇಕು. ಜೊತೆಗೆ 50 ಹಾಸಿಗೆಗಳ ಸಾಮಾರ್ಥ್ಯವುಳ್ಳ ಕೋವಿಡ್ ಕಾಳಜಿ ಕೇಂದ್ರವನ್ನು ಪ್ರತಿ ತಾಲ್ಲೂಕಿಗೆ ಒಂದರಂತೆ ಸಿದ್ದವಿಟ್ಟಿಕೊಳ್ಳಬೇಕು. ಹಾಗೂ ಮತ್ತೊಂದು ಕೇಂದ್ರವನ್ನು ಗುರುತಿಸಿಟ್ಟುಕೊಂಡಿರಬೇಕು ಎಂದು ತಿಳಿಸಿದರು. 

ಹೋಂ ಐಸೋಲೇಶನ್ ಗೆ ಆದ್ಯತೆ: 3ನೇ ಅಲೆಯಲ್ಲಿ ಹರಡುವ ಕೋವಿಡ್ ಸೋಂಕು ವೇಗವಾಗಿ ಹರಡುತ್ತದೆ ಆದರೆ ತೀವ್ರತರ ತೊಂದರೆ ನೀಡುವುದಿಲ್ಲ. ಮರಣ ಪ್ರಮಾಣವೂ ಸಹ ಕಡಿಮೆಯಿರುತ್ತದೆ. ಜೊತೆಗೆ ಅಲ್ಪ ಪ್ರಮಾಣದ ರೋಗಿಗಳಲ್ಲಿ ಮಾತ್ರ ರೋಗ ಲಕ್ಷಣಗಳು ಕಂಡುಬರುತ್ತವೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಆದ್ದರಿಂದ ಸೋಂಕಿತರನ್ನು ಹೋಂ ಐಸೋಲೇಶನ್ ನಲ್ಲಿಟ್ಟು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ ಔಷಧಿ ಕಿಟ್ ಗಳನ್ನು ಎಲ್ಲರಿಗೂ ಪೂರೈಸಲು ಆದ್ಯತೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಐಸೋಲೇಶನ್ ತಂಡಗಳು, ಗ್ರಾಮ/ವಾರ್ಡ್ ಟಾಸ್ಕ್ ಪೂರ್ಸ್ ಗಳ ಸದಸ್ಯರು ಹೆಚ್ಚಿನ ನಿಗಾವಹಿಸಬೇಕು ಎಂದರು.

3ನೇ ಅಲೆ ಜಿಲ್ಲೆಗೆ ಬರಕೂಡದು: ಜಿಲ್ಲಾಡಳಿತದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಕಳೆದ 2 ವರ್ಷಗಳಿಂದ ಕೋವಿಡ್ ನಿಯಂತ್ರಣ ಕಾರ್ಯಗಳನ್ನು ಹೆಚ್ಚು ಸಮರ್ಪಕ ಹಾಗೂ ಸಮರ್ಥವಾಗಿ ನಿರ್ವಹಿಸಿದ್ದೀರಿ ಅದರಂತೆ ಸಂಭಾವ್ಯ 3ನೇ ಕೋವಿಡ್ ನ ಅಲೆಯಲ್ಲಿಯೂ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಗೆ 3ನೇ ಅಲೆ ಬರದಂತೆ ತಡೆಯುವ ಜವಾಬ್ದಾರಿ ತಮ್ಮ ಮೇಲಿದೆ ಎಂದರು.

ದಂಡವಿಧಿಸಿ: ಕೋವಿಡ್ ನಿಯಂತ್ರಣದಲ್ಲಿ ಬಹು ಮುಖ್ಯ ಕ್ರಮವಾದ ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಪಾಡುವುದು. ನಿಯಮಿತವಾಗಿ ಕೈಗಳನ್ನು ಶುಚಿಗೊಳಿಸುವುದು ಸೇರಿದಂತೆ ಕೋವಿಡ್ ನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪ್ರತಿಯೊಬ್ಬರು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಯಾವುದೇ ವ್ಯಕ್ತಿಯು ಮುಖಗವಸನ್ನು ಧರಿಸದಿರುವುದು ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ದಂಡವನ್ನು ವಿಧಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯಾಡಳಿತಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯು ಜನಜಂಗುಳಿ ಪ್ರದೇಶದಲ್ಲಿ ದಂಡ ವಿಧಿಸುವ ಕಾರ್ಯವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಕಡಕ್ ಸೂಚನೆ ನೀಡಿದರು.

ಕೇಂದ್ರ ಸ್ಥಾನದಲ್ಲೆ ಇರಬೇಕು: ರಾಜ್ಯಾದ್ಯಂತ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ಕಾರಿ ರಜಾ ದಿನಗಳನ್ನು ಲೆಕ್ಕಿಸದೇ ಕಾರ್ಯನಿರ್ವಹಿಸಬೇಕಿದೆ. ರಜೆ ಇದೆ ಎಂದು ಕೇಂದ್ರ ಸ್ಥಾನವನ್ನು ತೊರೆಯಬಾರದು, ಕೇಂದ್ರ ಸ್ಥಾನದಲ್ಲೆ ಉಳಿದು ಲಸಿಕಾಕರಣವನ್ನು ನಿರಂತರವಾಗಿ ಮುಂದುವರಿಸುವುದರ ಜೊತೆಗೆ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಕಾನೂನು ಕ್ರಮಕ್ಕೆ ಗುರಿಯಾಗುತ್ತೀರಿ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಕೋವಿಡ್ ಪ್ರಕರಣಗಳು ಹೆಚ್ಚಾಗುವ ಮುನ್ಸೂಚನೆ ನೀಡುತ್ತಿರುವ ಆರಂಭಿಕ ಹಂತದ ಈ ಮುಂದಿನ 2 ವಾರಗಳಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರೆ ಮುಂದಾಗುವ ಅವಗಡಗಳನ್ನು ತಡೆಗಟ್ಟಬಹುದು. ಅದಕ್ಕಾಗಿ ಸರ್ಕಾರದ ಸೂಚನೆಗಳನ್ನು ಯಥಾವತ್ತಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವುದು ಅನಿವಾರ್ಯವಾಗಿದೆ. ರಾತ್ರಿ ಮತ್ತು ವಾರಾಂತ್ಯದ ಕರ್ಪ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು  ಪೊಲೀಸ್ ಇಲಾಖೆಯಿಂದ ಚೆಕ್ ಪೊಸ್ಟ್ ಗಳನ್ನು ಹಾಕಲಾಗಿದ್ದು, ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಿಲಾಗಿದೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಸೂಚನೆಯನ್ನು ನೀಡಲಾಗಿದೆ. ವಾರಾಂತ್ಯದ ಕರ್ಪ್ಯೂ ಅವಧಿಯಲ್ಲಿ ಹಣ್ಣು, ತರಕಾರಿ, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ, ತಳ್ಳುವ ಗಾಡಿಗಳ ಮೂಲಕ ವ್ಯಾಪಾರ ಮಾಡುವವರಿಗೆ ಅವಕಾಶವಿರುತ್ತದೆ. 

ಕರ್ಪ್ಯೂ ಅವಧಿ ಹೊರತುಪಡಿಸಿದ ದಿನಗಳಲ್ಲಿ ಜನಜಂಗುಳಿಯಾಗುವ ಅಂಗಡಿ, ಮುಗ್ಗಟ್ಟು, ಮಾರುಕಟ್ಟೆಗಳಲ್ಲಿ ಸ್ಯಾನಿಟೈಸ್ ಮಾಡುವುದು, ಅಂತರದಿಂದ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು. ಸಾಮಾಜಿಕ ಅಂತರ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಆಟೋ ಅಥವಾ ಧ್ವನಿ ವರ್ಧಕಗಳ ಮೂಲಕ ಪ್ರಚಾರ ಮಾಡಲು ನಗರ ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರಿಗಳು ಕ್ರಮವಹಿಸಬೇಕು. ಅದರಲ್ಲೂ ಜಿಲ್ಲೆಯಲ್ಲಿರುವ ರೇಷ್ಮೆ, ಟಮೋಟೋ ಮಾರುಕಟ್ಟೆಗಳು ಸೇರಿದಂತೆ ಎ.ಪಿ.ಎಂ.ಸಿ. ಮಾರುಕಟ್ಟೆಗಳಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.  ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ತಂಡವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಜನಸಂದಣಿ ಪ್ರದೇಶಗಳಲ್ಲಿ ಮಾರುಕಟ್ಟೆ ಮತ್ತು ಸಂತೆ ನಡೆಯುವ  ಸ್ಥಳಗಳಲ್ಲಿ ಹಾಗೂ ಮದುವೆ ಇನ್ನಿತರ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿಸಿದವರಿಗೆ ನಿಯಮಾವಳಿ ರೀತ್ಯಾ ಕಾನೂನು ಕ್ರಮ ಜರುಗಿಸಲು ಈಗಾಗಲೇ ನಮ್ಮ ಸಿಬ್ಬಂದಿಗೆ ಸೂಚಿಸಿದ್ದೇನೆ. ಆದ್ದರಿಂದ ಜಿಲ್ಲೆಯ ಜನರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಾಗ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಣ ಕಾರ್ಯಪಡೆಗಳ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸ್ಥಳೀಯ ಜನ ಪ್ರತಿನಿಧಿಗಳ ಸಹಕಾರ ಪಡೆದು ಶಾಲಾ ಕಾಲೇಜುಗಳಿಂದ ಹೊರಗುಳಿದ 15 ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸಬೇಕು. ಮನೆ ಮನೆಗೆ  ಭೇಟಿ ಮಾಡಿ 2ನೇ ಡೋಸ್ ಲಸಿಕೆ ಪಡೆಯಲು ಬಾಕಿಯಿರುವ ಅರ್ಹರನ್ನು ಲಸಿಕಾ ಕೇಂದ್ರಗಳಿಗೆ ಕರೆತಂದು ಲಸಿಕಾಕರಣಕ್ಕೆ ಒಳಪಡಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ವಾಹನಗಳನ್ನು ಬಳಸಿಕೊಂಡು ಕೋವಿಡ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಬಗ್ಗೆ ಪ್ರಚಾರ ಮಾಡಬೇಕು. ನಿಗಧಿತ ರೀತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ನಡೆಸಬೇಕು. ಅದರಲ್ಲೂ ಟಮೋಟೋ ಮತ್ತು ರೇಷ್ಮೆ ಮಾರುಕಟ್ಟೆಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಹೆಚ್ಚಾಗಿ ಜಾರಿಗೊಳಿಸಬೇಕು ಎಂದರು.

ಆನ್ ಲೈನ್ ಸಂವಾದ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್ ಕಬಾಡೆ, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರ್ ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಕೋವಿಡ್ ನಿಯಂತ್ರಣ ನೋಡಲ್ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!