ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು: ಸಚಿವ ಎನ್.ನಾಗರಾಜು (ಎಂ.ಟಿ.ಬಿ)

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆಯಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಜೊತೆಯಲ್ಲಿ ಪರೀಕ್ಷೆಗಳ ಹೆಚ್ಚಳ ಹಾಗೂ ಲಸಿಕಾಕರಣವನ್ನು ಮತ್ತಷ್ಟು ವೇಗಗೊಳಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ (ಕೋವಿಡ್)  ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ) ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ಬೆಳೆಹಾನಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣವು ಶೇ.95 ರಷ್ಟು ಮೊದಲ ಡೋಸ್ ಹಾಗೂ ಶೇ.84 ರಷ್ಟು ಎರಡನೇ ಡೋಸ್ ಪ್ರಗತಿಯಾಗಿದ್ದು, ನೂರರಷ್ಟು ಪ್ರಗತಿಯನ್ನು ಶೀಘ್ರವಾಗಿ ಸಾಧಿಸುವಂತೆ ತಿಳಿಸಿದರು.

15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 48865 ಮಕ್ಕಳಿದ್ದು, ಈ ಪೈಕಿ 14536 ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಕಾರಣಾಂತರಗಳಿಂದ ಶಾಲೆ ಬಿಟ್ಟ ಮಕ್ಕಳನ್ನು ಸಹಾ ಗುರುತಿಸಿ, ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಕಳೆದ ಒಂದು ವಾರದಲ್ಲಿ ನೆಲಮಂಗಲ ತಾಲ್ಲೂಕಿನಲ್ಲಿ ಶೇ 1.49, ಹೊಸಕೋಟೆ ‌ತಾಲ್ಲೂಕಿನಲ್ಲಿ ಶೇ.‌0.99, ದೇವನಹಳ್ಳಿ ತಾಲ್ಲೂಕಿನಲ್ಲಿ ಶೇ. 1.01 ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಶೇ. 0.25 ರಷ್ಟು ಕೋವಿಡ್ ಪಾಸಿಟಿವಿಟಿ ದರ ದಾಖಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ‌ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್ ಮಾತನಾಡಿ ಹೊರ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ, ದೇವನಹಳ್ಳಿ ಏರ್‌ಪೋರ್ಟ್‌ನಲ್ಲಿ ಕಟ್ಟು ನಿಟ್ಟಿನ‌ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ಮಳೆ ಹಾನಿ ಹಾಗೂ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ತೋರದೆ, ಶೀಘ್ರ ಪರಿಹಾರ ನೀಡಲು ತಿಳಿಸಿದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ ಮಾತನಾಡಿ, ಬಡವರಿಗೆ ಸೌಲಭ್ಯ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿ ಎಂದರಲ್ಲದೆ, ಕೋವಿಡ್-19 ಮೂರನೇ ಅಲೆ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಲು ‌ತಿಳಿಸಿದರು.

ಅಕಾಲಿಕ ಮಳೆಯಿಂದ ಉಂಟಾದ ಬೆಳೆಹಾನಿ ಹಾಗೂ ಮನೆ ಹಾನಿ ವಿವರ ಹಾಗೂ ಪರಿಹಾರ ವಿತರಣೆ ಕುರಿತು ಸಚಿವರು ಹಾಗೂ ಶಾಸಕರು ಕೇಳಿದಾಗ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ 2095, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5135, ಹೊಸಕೋಟೆ ತಾಲ್ಲೂಕಿನಲ್ಲಿ 2025 ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 1985 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 11,240 ಹೆಕ್ಟೇರ್ ವಿಸ್ತೀರ್ಣ ಪ್ರದೇಶದ ಬೆಳೆನಷ್ಟ ಮಾಹಿತಿಯನ್ನು ಈಗಾಗಲೇ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಇಲ್ಲಿಯವರೆಗೂ 14157 ಫಲಾನುಭವಿಗಳಿಗೆ 8391.94 ಹೆಕ್ಟೇರ್ ಪ್ರದೇಶಕ್ಕೆ ರೂ. 6274 ಕೋಟಿ ಹಣ ಸಂದಾಯವಾಗಿದೆ ಎಂದು ತಿಳಿಸಿದರು.

ಮಳೆಯಿಂದಾಗಿ ಭಾಗಶಃ ಹಾಗೂ ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಒಟ್ಟು 220

ಮನೆಗಳ ವಿವರವನ್ನು ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಲಾಗಿದ್ದು, ಪರಿಹಾರ ವಿತರಣೆಯ ಕಾರ್ಯ ಪ್ರಗತಿಯಲ್ಲಿದೆ ಎಂದರು.

ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆ ನಡೆಸಲು ನಡೆಸಲಾಗುತ್ತಿದ್ದು, ಹೈ ರಿಸ್ಕ್ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದರಲ್ಲದೆ, ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ ವ್ಯಕ್ತಿಗೆ ಪಾಸಿಟಿವ್ ವರದಿ ಬಂದಲ್ಲಿ ಬೌರಿಂಗ್ ಹಾಸ್ಪಿಟಲ್‌ನಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರಿಸಲು  ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣಪ್ಪ, ಅಪರ ಜಿಲ್ಲಾಧಿಕಾರಿ ವಿಜಯ. ಈ.ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ‌ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ

2023ರ ಮೇ ನಲ್ಲಿ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸಂಭವಿಸಿದ ನಂತರ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

[ccc_my_favorite_select_button post_id="113885"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!