ದೊಡ್ಡಬಳ್ಳಾಪುರ: ಕೋವಿಡ್ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅದರನ್ವಯ ತಾಲೂಕಿನದ್ಯಂತ ವೀಕೆಂಡ್ ಮತ್ತು ನೈಟ್ ಕಪ್ರ್ಯೂ ಪಾಲನೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಸತೀಶ್ ಅವರು ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯನ್ವಯ ನೈಟ್ ಕಪ್ರ್ಯೂ ಮುಂದುವರಿಯಲಿದ್ದು, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕಪ್ರ್ಯೂ ಜಾರಿಗೆ ಬರಲಿದೆ.
ಜನರು ಏನೇ ಕೆಲಸವಿದ್ದರೂ, ಎಲ್ಲಿಗೇ ಹೋಗುವುದಿದ್ದರೂ ಇಂದು ರಾತ್ರಿ 8 ಗಂಟೆಯೊಳಗೆ ಎಲ್ಲಾ ಮುಗಿಸಿ ಮನೆಗೆ ಸೇರಬೇಕು. ಇಂದು ರಾತ್ರಿ 8 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಗೆ ಬರುತ್ತದೆ. ಇದು ಜನವರಿ 19ರ ಮುಂಜಾನೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ವಿಕೆಂಡ್ ಕಪ್ರ್ಯೂ ಸಮಯದಲ್ಲಿ ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದವುಗಳಿಗೆ ಅವಕಾಶವಿರುವದಿಲ್ಲ. ಆದರೆ ಹೊಟೆಲ್ ಗಳಲ್ಲಿ ಪಾರ್ಸೆಲ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು. ಬೋರ್ಡ್/ ಕಾರ್ಪೊರೇಷನ್ ಸಿಬ್ಬಂದಿಗಳು, ಪೊಲೀಸ್, ಹೋಂ ಗಾರ್ಡ್, ಸಿವಿಲ್ ಡಿಫೆನ್ಸ್, ಅಗ್ನಿ ಶಾಮಕ & ತುರ್ತು ಸೇವೆಗಳ ಸಿಬ್ಬಂದಿ ಬಸ್‌ನಲ್ಲಿ ಸಂಚಾರ ನಡೆಸಬಹುದಾಗಿದೆ.
ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಲ್ಯಾಬ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇತರ ಸಿಬ್ಬಂದಿಗಳು.ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು.
ಸರ್ಕಾರಿ/ ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಭಂದಿಗಳು, ಅಧಿಕಾರಿಗಳು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸಂಚರಿಸಬಹುದು.
ದೂರದ ಊರುಗಳಿಗೆ ಪ್ರಯಾಣ ಮಾಡುವ ಬಸ್, ವಿಮಾನ, ರೈಲು ಪ್ರಯಾಣಿಕರು. (ಟಿಕೆಟ್ ತೋರಿಸಿ ಪ್ರಯಾಣ ಮಾಡಬೇಕು).ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದು.
ಬಸ್‌ನಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯವಾಗಿ ಐಡಿ ಕಾರ್ಡ್ ತೋರಿಸಬೇಕು. ಸಾಮಾನ್ಯ ಜನರಿಗೆ ಬಸ್‌ನಲ್ಲಿ ಸಂಚಾರ ನಡೆಸಲು ಅವಕಾಶವಿಲ್ಲ.
ಬೈಕ್ ಸೀಜ್: ವೀಕೆಂಡ್ ಕಪ್ರ್ಯೂ ಸಮಯದಲ್ಲಿ ಸುಖಾಸುಮ್ಮನೆ ಓಡಾಡುವವರ ವಾಹನಗಳನ್ನು ಸೀಜ್ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ ಹೊರವಲಯದ ರಾಜಾನುಕುಂಟೆ, ದೊಡ್ಡಬಳ್ಳಾಪುರ ನಗರ, ಬಾಶೆಟ್ಟಹಳ್ಳಿ, ಹಾಗೂ ಕಂಟನಕುಂಟೆ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಘಾಟಿ ದೇವಲಯ ಪ್ರವೇಶ ನಿರ್ಬಂಧ ಇರುವುದರಿಂದ ವಾಹನಗಳಲ್ಲಿ ಬಂದಲ್ಲಿ ವಾಹನ ಸೀಜ್ ಮಾಡಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….