ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್‌ಡೌನ್ ಕಳೆದುಹೋಗಿರುವ ನೀತಿಯಾಗಿದ್ದ ಮುಂದೆ ಇನ್ನು ಯಾವತ್ತೂ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲಾಕ್‌ಡೌನ್ ಕಳೆದುಹೋಗಿರುವ ನೀತಿ. ಆರಂಭದ ಹಂತದಲ್ಲಿ ಕೋವಿಡ್ ಸೋಂಕು, ವೈರಾಣುವಿನ ಗುಣ ಮತ್ತು ಸ್ವಭಾವ, ಚಿಕಿತ್ಸಾ ವಿಧಾನ ಯಾವುದೂ ಗೊತ್ತಿರಲಿಲ್ಲ. ಆಗ ಅನುಭವದ ಕೊರತೆಯಿಂದ ಲಾಕ್‌ಡೌನ್ ಜಾರಿಗೊಳಿಸಿದ್ದೆವು. ಇನ್ನು ಹಾಗಾಗುವುದಿಲ್ಲ ಎಂದರು.
ಎರಡು ವರ್ಷಗಳ ಅನುಭವದಿಂದ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಯ ಕುರಿತು ಅರಿವು ಇದೆ. ಈಗ ಕೋವಿಡ್ ಹರಡುವುದನ್ನು ಲಾಕ್‌ಡೌನ್ ಜಾರಿಗೊಳಿಸುವುದರಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಲಸಿಕೆ ಮತ್ತು ಮುನ್ನೆಚ್ಚರಿಕೆಯಿಂದ ಮಾತ್ರವೇ ಕೋವಿಡ್ ನಿಯಂತ್ರಣ ಸಾಧ್ಯ ಎಂದು ಹೇಳಿದ್ದಾರೆ.
ಓಮೈಕ್ರಾನ್ ತಳಿಯ ಕರೊನಾ ವೈರಾಣುವಿನ ಸೋಂಕು ಹರಡದಂತೆ ತಡೆಯುವುದು ಅಸಾಧ್ಯ. ಸಹಜವಾಗಿಯೇ ಪಾಸಿಟಿವಿಟಿ ದರ ಹೆಚ್ಚಳ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಜನರು ಆತಂಕಕ್ಕೆ ಒಳಗಾಗುವುದು ಬೇಡಾ. ಆದರೆ ಹೆಚ್ಚು ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಸುಧಾಕರ್ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….