ದೊಡ್ಡಬಳ್ಳಾಪುರ: ಇಂದು ರಾತ್ರಿ 8ರಿಂದ ವಾರಾಂತ್ಯದ ಕಪ್ರ್ಯೂ ಜಾರಿ / ತಾಲೂಕಿನ ವಿವಿಧೆಡೆ ಚೆಕ್ ಪೋಸ್ಟ್ ಸ್ಥಾಪನೆ / ಅನಾವಶ್ಯಕವಾಗಿ ರಸ್ತೆಗಿಳಿದರೆ ವಾಹನಗಳು ಸೀಜ್…!

ದೊಡ್ಡಬಳ್ಳಾಪುರ: ಕೋವಿಡ್ ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಅದರನ್ವಯ ತಾಲೂಕಿನದ್ಯಂತ ವೀಕೆಂಡ್ ಮತ್ತು ನೈಟ್ ಕಪ್ರ್ಯೂ ಪಾಲನೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್ ಸತೀಶ್ ಅವರು ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯನ್ವಯ ನೈಟ್ ಕಪ್ರ್ಯೂ ಮುಂದುವರಿಯಲಿದ್ದು, ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕಪ್ರ್ಯೂ ಜಾರಿಗೆ ಬರಲಿದೆ.

ಜನರು ಏನೇ ಕೆಲಸವಿದ್ದರೂ, ಎಲ್ಲಿಗೇ ಹೋಗುವುದಿದ್ದರೂ ಇಂದು ರಾತ್ರಿ 8 ಗಂಟೆಯೊಳಗೆ ಎಲ್ಲಾ ಮುಗಿಸಿ ಮನೆಗೆ ಸೇರಬೇಕು. ಇಂದು ರಾತ್ರಿ 8 ಗಂಟೆಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಗೆ ಬರುತ್ತದೆ. ಇದು ಜನವರಿ 19ರ ಮುಂಜಾನೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ವಿಕೆಂಡ್ ಕಪ್ರ್ಯೂ ಸಮಯದಲ್ಲಿ ಮೆಡಿಕಲ್, ಹಾಲಿನ ಅಂಗಡಿ ಹೊರತುಪಡಿಸಿ ಉಳಿದವುಗಳಿಗೆ ಅವಕಾಶವಿರುವದಿಲ್ಲ. ಆದರೆ ಹೊಟೆಲ್ ಗಳಲ್ಲಿ ಪಾರ್ಸೆಲ್ಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳು. ಬೋರ್ಡ್/ ಕಾರ್ಪೊರೇಷನ್‌ ಸಿಬ್ಬಂದಿಗಳು, ಪೊಲೀಸ್, ಹೋಂ ಗಾರ್ಡ್, ಸಿವಿಲ್ ಡಿಫೆನ್ಸ್‌, ಅಗ್ನಿ ಶಾಮಕ & ತುರ್ತು ಸೇವೆಗಳ ಸಿಬ್ಬಂದಿ ಬಸ್‌ನಲ್ಲಿ ಸಂಚಾರ ನಡೆಸಬಹುದಾಗಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ, ಲ್ಯಾಬ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇತರ ಸಿಬ್ಬಂದಿಗಳು.ಆಸ್ಪತ್ರೆಗೆ ತೆರಳುವ ರೋಗಿಗಳು ಮತ್ತು ಅವರನ್ನು ಚಿಕಿತ್ಸೆ, ಪರೀಕ್ಷೆಗೆ ಕರೆದುಕೊಂಡು ಹೋಗವವರು ಸಂಚಾರ ನಡೆಸಬಹುದು.

ಸರ್ಕಾರಿ/ ಖಾಸಗಿ ಬ್ಯಾಂಕ್, ವಿಮೆ ಕಂಪನಿಗಳ ಸಿಬ್ಭಂದಿಗಳು, ಅಧಿಕಾರಿಗಳು. ಮಾಧ್ಯಮದಲ್ಲಿ ಕೆಲಸ ಮಾಡುವವರು ಸಂಚರಿಸಬಹುದು.

ದೂರದ ಊರುಗಳಿಗೆ ಪ್ರಯಾಣ ಮಾಡುವ ಬಸ್, ವಿಮಾನ, ರೈಲು ಪ್ರಯಾಣಿಕರು. (ಟಿಕೆಟ್ ತೋರಿಸಿ ಪ್ರಯಾಣ ಮಾಡಬೇಕು).ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದು.

ಬಸ್‌ನಲ್ಲಿ ಪ್ರಯಾಣಿಸುವ ಎಲ್ಲರೂ ಕಡ್ಡಾಯವಾಗಿ ಐಡಿ ಕಾರ್ಡ್ ತೋರಿಸಬೇಕು. ಸಾಮಾನ್ಯ ಜನರಿಗೆ ಬಸ್‌ನಲ್ಲಿ ಸಂಚಾರ ನಡೆಸಲು ಅವಕಾಶವಿಲ್ಲ.

ಬೈಕ್ ಸೀಜ್:  ವೀಕೆಂಡ್ ಕಪ್ರ್ಯೂ ಸಮಯದಲ್ಲಿ ಸುಖಾಸುಮ್ಮನೆ ಓಡಾಡುವವರ ವಾಹನಗಳನ್ನು ಸೀಜ್ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ತಾಲೂಕಿನ ಹೊರವಲಯದ ರಾಜಾನುಕುಂಟೆ, ದೊಡ್ಡಬಳ್ಳಾಪುರ ನಗರ, ಬಾಶೆಟ್ಟಹಳ್ಳಿ, ಹಾಗೂ ಕಂಟನಕುಂಟೆ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಘಾಟಿ ದೇವಲಯ ಪ್ರವೇಶ ನಿರ್ಬಂಧ ಇರುವುದರಿಂದ ವಾಹನಗಳಲ್ಲಿ ಬಂದಲ್ಲಿ ವಾಹನ ಸೀಜ್ ಮಾಡಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!