ದೊಡ್ಡಬಳ್ಳಾಪುರ: ಮಾರುಕಟ್ಟೆಯಲ್ಲಿ ಅವರೆಕಾಯಿ ಸೊಗಡು ಆರಂಭ / ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು / ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ

ದೊಡ್ಡಬಳ್ಳಾಪುರ: ಡಿಸೆಂಬರ್‌, ಜನವರಿ ಬಂದರೆ ಪ್ರತಿ ಮನೆಯಲ್ಲಿಯೂ ಅವರೆಕಾಯಿ ಘಮಲು ಇದ್ದೇ ಇರುತ್ತದೆ. ಚಳಿಗಾಲದಲ್ಲಿ ಅವರೆಕಾಳಿನ ಉಪ್ಪೆಸರು, ಇತಕು ಬೇಳೆ, ಮುದ್ದೆ ಹೆಸರು ಕೇಳಿದರೆ ಎಂತಹವರ ಬಾಯಲ್ಲೂನೀರು ಬರುತ್ತದೆ. ಅದರಲ್ಲೂ ಸೊಗಡು ಅವರೆಕಾಳಿನಸಾರು, ಮುದ್ದೆ ರುಚಿಯ ಮುಂದೆ ಬೇರೆ ಊಟವಿಲ್ಲ. ತಾಲೂಕಿನ ರೈತರು ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು ಈಗ ತಾಲೂಕಿನಲ್ಲಿ ಹರಡಿಕೊಂಡಿದ್ದು, ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ ಮಾಡಲಾಗುತ್ತಿದೆ.

ತಾಲೂಕಿನ 5 ಹೋಬಳಿಯಲ್ಲಿ ರಾಗಿ, ಮೆಕ್ಕೆ ಜೋಳ ಹೆಚ್ಚಾಗಿ ಬೆಳೆದಿದ್ದು, ಅದರ ಮಧ್ಯದಲ್ಲಿ ಕೆಲ ರೈತರು ಅವರೆ ಬೆಳೆಯನ್ನು ಹಾಕಿದ್ದಾರೆ. ಈ ಬಾರಿ ಮಳೆ ಹೆಚ್ಚಳ, ನಂತರ ಮಾಗಿಯ ಚಳಿ ಹೆಚ್ಚಿದ್ದು, ಬೆಳಗ್ಗೆ 9 ಗಂಟೆಯಾದರು ಮಂಜು ಬೀಳುತ್ತಲೇ ಇರುತ್ತದೆ. ಇದು ಅವರೆ ಬೆಳೆಗೆ ಹೇಳಿ ಮಾಡಿದಂತಹ ವಾತಾವರಣವಾಗಿದೆ.

ಇಳುವರಿ ಹೆಚ್ಚಳ: ಅವರೆ ಬಳ್ಳಿ ಹಾಗೂ ಅದರ ಕಾಯಿಯ ಮೇಲೆ ಬಿದ್ದಿರುವ ಮಂಜಿನ ಹನಿ ನೋಡುವುದೇ ಒಂದು ಸೊಬಗು, ಅವರೆಕಾಯಿ ಮುಟ್ಟಿದರೆ ಅದರ ಸೊಗಡು ಕೈಗೆ ಅಂಟುತ್ತಿದೆ. ಅಷ್ಟರಮಟ್ಟಿಗೆ ಈ ಬಾರಿ ಅವರೆಕಾಯಿ ಬೆಳೆದಿದ್ದು, ಇಳುವರಿಯೂ ಉತ್ತಮವಾಗಿದೆ.

ಬೇಡಿಕೆ ಹೆಚ್ಚು: ತಾಲೂಕಿನಲ್ಲಿ ಯಂತ್ರಗಳನ್ನು ಬಳಸಿ ಬೆಳೆ ಕಟಾವು ಮಾಡುವ ಪ್ರಕ್ರಿಯೆ ಹೆಚ್ಚಾಗಿರುವುದರಿಂದ ಅವರೆ ಬೆಳೆ ಬೆಳೆಯುವರ ಸಂಖ್ಯೆ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಸ್ಥಳೀಯವಾಗಿ ಅಲ್ಲದೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ  ಹಾಗೂ ಆಂಧ್ರ ಪ್ರದೇಶದಿಂದ ಸೊಗಡು ಅವರೆಕಾಯಿ ತಾಲೂಕಿನ ಮಾರುಕಟ್ಟೆಗೆ ಬರುತ್ತದೆ. 

ಮಾರುಕಟ್ಟೆಯಲ್ಲಿ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿಅವರೆಕಾಯಿ ದೊರೆಯುತ್ತಿಲ್ಲ. ಒಂದು ಕೆಜಿ ಅವರ ಈಗ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಕಡಿಮೆ ಇಲ್ವಾ ಎಂದು ಗ್ರಾಹಕರು ಕೇಳಿದ್ರೆ 100 ರೂ. ಕೊಡಿ ಎರಡುವರೆ ಕೆಜಿ ತೆಗೆದುಕೊಳ್ಳಿ ಎನ್ನುತ್ತಿದ್ದಾರೆ ವರ್ತಕರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ

2023ರ ಮೇ ನಲ್ಲಿ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸಂಭವಿಸಿದ ನಂತರ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

[ccc_my_favorite_select_button post_id="113885"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!